ಕೇರಳಕ್ಕೆ ಎಲ್ಲಾ ಅಗತ್ಯ ನೆರವಿನ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ,ಜು.31– ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕರ್ನಾಟಕದ ಇಬ್ಬರು ಮೃತಪಟ್ಟಿದ್ದು, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲಾ ಬೆಂಬಲ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದುರ್ಘಟನೆಯಲ್ಲಿ ಮೃತರ ಆತಕ್ಕೆ ಶಾಂತಿ ಕೋರಿದ್ದಾರೆ. ಈವರೆಗಿನ ಮಾಹಿತಿ ಪ್ರಕಾರ, ಕರ್ನಾಟಕದ ಇಬ್ಬರ ಜೀವಹಾನಿಯಾಗಿದೆ. ಇಂದು ಬೆಳಿಗ್ಗೆ ತಾವು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರೊಂದಿಗೆ ದೂರವಾಣಿಯಲ್ಲಿ ಚರ್ಚೆ ನಡೆಸಿದ್ದು, ಕರ್ನಾಟಕ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಭರವಸೆ ನೀಡಿದ್ದೇವೆ ಎಂದರು. ರಾಜ್ಯದ … Continue reading ಕೇರಳಕ್ಕೆ ಎಲ್ಲಾ ಅಗತ್ಯ ನೆರವಿನ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ