Monday, May 6, 2024
Homeರಾಜ್ಯದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ

ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆ.28- ದೇಶದ್ರೋಹಿಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ, ಮುಲಾಜಿಲ್ಲದೇ ಮಟ್ಟ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆಯೇ? ಇಲ್ಲವೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ.

ಸಂಬಂಧಪಟ್ಟ ವಿಡಿಯೋಗಳನ್ನು ಈಗಾಗಲೇ ಎಫ್‍ಎಸ್‍ಎಲ್‍ಗೆ ಕಳುಹಿಸಿದ್ದೇವೆ. ಘೋಷಣೆ ಕೂಗಿದ್ದೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಈ ರೀತಿಯ ಕೃತ್ಯಗಳಲ್ಲಿ ಯಾರೇ ಭಾಗಿಯಾಗಿದ್ದರೂ ಕಠಿಣ ಕ್ರಮ ಅನಿವಾರ್ಯ. ದೇಶದ್ರೋಹಿಗಳನ್ನು ಮಟ್ಟ ಹಾಕಲಾಗುವುದು ಎಂದು ತಿಳಿಸಿದರು.

ಪಾಕಿಸ್ತಾನ ಪರ ಘೋಷಣೆ : ವಿಧಾನಪರಿಷತ್‍ನಲ್ಲೂ ಕೋಲಾಹಲ

ಸಚಿವ ಜಮೀರ್ ಅಹಮ್ಮದ್ ಖಾನ್: ಬೆಂಗಳೂರು,ಫೆ.28- ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಘಟನೆ ನಡೆದಿದ್ದೇ ಆಗಿದ್ದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಆ ರೀತಿಯ ಘಟನೆ ಆಗಿಲ್ಲ ಎಂದು ರಾಜ್ಯಸಭೆಯ ಸದಸ್ಯ ಸಯ್ಯದ್ ನಾಸಿರ್ ಹುಸೇನ್ ಸ್ಪಷ್ಟನೆ ಕೊಟ್ಟಿದ್ದಾರೆ. ಅದರ ನಂತರವೂ ತನಿಖೆಗಾಗಿ ವಿಡಿಯೋವನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಿಕೊಡಲಾಗಿದೆ, ತನಿಖೆ ಮುಂದುವರೆದಿದೆ. ಘೋಷಣೆ ಕೂಗಿದ್ದರೆ ತಕ್ಕ ಶಿಕ್ಷೆ ಆಗುವುದು ಅಗತ್ಯ ಎಂದು ಹೇಳಿದರು.

ಬಿಜೆಪಿಯವರು ಸೋತು ಸುಣ್ಣವಾಗಿದ್ದಾರೆ. ಮುಖಭಂಗ ಅನುಭವಿಸಿದ್ದಾರೆ. ಹೀಗಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ವಿಷಯಗಳಿಲ್ಲ. ನಿನ್ನೆ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿಯವರ ರಾಜೀನಾಮೆ ಕೇಳುವುದು ಅಗತ್ಯವಿಲ್ಲ. ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದೇ ಆಗಿದ್ದರೆ ಅಂತವರನ್ನು ದೇಶದ್ರೋಹಿ ಎನ್ನುತ್ತೇನೆ ಎಂದರು.

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಬೇಡಿ : ಸಭಾಧ್ಯಕ್ಷ ಯು.ಟಿ.ಖಾದರ್

ಸಚಿವ ಮಧು ಬಂಗಾರಪ್ಪ : ಬೆಂಗಳೂರು,ಫೆ.28- ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ನಿಜವಾಗಿದ್ದರೆ ಅಂತವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ ಇದರಲ್ಲಿ ಬೇರೆ ಸ್ವರೂಪವೇ ಇದೆ. ಬಿಜೆಪಿಯವರು ಇಂತಹ ವಿಚಾರಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುವ ಕೆಟ್ಟ ಚಾಳಿ ಖಂಡನೀಯ ಎಂದರು.

ಪಾಕಿಸ್ತಾನದ ಪರ ಘೋಷಣೆ ಕೂಗಿದ್ದೇ ನಿಜವಾಗಿದ್ದರೆ ಅಂತವರ ವಿರುದ್ಧ ನಾವೆಲ್ಲಾ ಸೇರಿ ಧಿಕ್ಕಾರ ಕೂಗಬೇಕಿದೆ. ಈ ವಿಚಾರವನ್ನು ಸಂಪೂರ್ಣವಾಗಿ ಗೃಹ ಇಲಾಖೆ ಮತ್ತು ಕಾನೂನು ಸುವ್ಯವಸ್ಥೆ ನೋಡಿಕೊಳ್ಳುತ್ತದೆ. ತಪ್ಪುಗಳಾಗಿದ್ದರೆ ಸಂಬಂಧಪಟ್ಟವರು ರಾಜೀನಾಮೆ ನೀಡುವುದ ಅಗತ್ಯ ಎಂದರು. ಬಿಜೆಪಿಯವರು ವಾಸ್ತವವನ್ನು ತಿಳಿದುಕೊಳ್ಳುವ ಮೊದಲೇ ಮಾಧ್ಯಮಗಳ ವಿಡಿಯೋ ಇಟ್ಟುಕೊಂಡು ಪ್ರತಿಭಟನೆ ನಡೆಸುವುದು ಖಂಡನೀಯ ಎಂದರು.

RELATED ARTICLES

Latest News