Friday, February 23, 2024
Homeರಾಜ್ಯಅಡ್ವಾಣಿಯವರಿಗೆ ಭಾರತರತ್ನ ನೀಡಿರುವುದು ಸ್ವಾಗತಾರ್ಹ : ಸಿಎಂ ಸಿದ್ದರಾಮಯ್ಯ

ಅಡ್ವಾಣಿಯವರಿಗೆ ಭಾರತರತ್ನ ನೀಡಿರುವುದು ಸ್ವಾಗತಾರ್ಹ : ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಫೆ.3- ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಯವರಿಗೆ ಭಾರತ ರತ್ನ ನೀಡುವುದು ಸ್ವಾಗತಾರ್ಹ. ಆದರೆ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರಿಗೆ ಭಾರತ ರತ್ನ ನೀಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡ್ವಾಣಿಯವರಿಗೆ ಪ್ರಶಸ್ತಿ ಕೊಡಲಿ ಪಾಪ, ಬೇಡ ಎಂದು ಹೇಳಿದವರ್ಯಾರು ಎಂದರು.

ತುಮಕೂರಿನ ಸಿದ್ದಗಂಗಾ ಸ್ವಾಮೀಜಿಯವರಿಗೆ ಭಾರತ ರತ್ನ ಕೊಡುವಂತೆ ತಾವು ಪತ್ರ ಬರೆದಿದ್ದೆವು ಎಂದು ಸ್ಮರಿಸಿಕೊಂಡರು. ನಗರೋತ್ಥಾನ ಯೋಜನೆಯಡಿ ಕಾಮಗಾರಿಗಳ ಬಿಲ್ ಪಾವತಿಸಲು ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪದ ಕುರಿತು ದೂರು ನೀಡಿದರೆ ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಶೀಘ್ರವೇ ಅಭ್ಯರ್ಥಿಗಳನ್ನು ಪ್ರಕಟಿಸಲಾಗುವುದು. ಈ ಕುರಿತಂತೆ ರಾಜ್ಯಾದ್ಯಂತ ಸಮೀಕ್ಷೆ ನಡೆಯುತ್ತಿದೆ ಎಂದು ಹೇಳಿದರು.

ಮುಂದಿನ ವಾರದಿಂದ 29 ರೂ.ಗೆ ಸಿಗಲಿದೆ ಭಾರತ್ ಬ್ರಾಂಡ್ ಅಕ್ಕಿ

ಬೆಳಗಾವಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಆದರೆ ಅಂತಿಮವಾಗಿ ಸ್ಥಳೀಯ ನಾಯಕರ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು. ಬಾಗೂರು ದೇವಸ್ಥಾನದ ಗರ್ಭಗುಡಿಗೆ ಈಶ್ವರಾನಂದ ಪುರಿ ಸ್ವಾಮೀಜಯವರ ಪ್ರವೇಶಕ್ಕೆ ಅವಕಾಶ ನೀಡಿಲ್ಲ ಎಂಬ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು.

RELATED ARTICLES

Latest News