Wednesday, September 11, 2024
Homeರಾಜಕೀಯ | Politicsಸಿದ್ದರಾಮಯ್ಯನವರೇ ಭಂಡತನ ಬಿಟ್ಟು ರಾಜೀನಾಮೆ ನೀಡಿ : ಬಿ.ವೈವಿಜಯೇಂದ್ರ

ಸಿದ್ದರಾಮಯ್ಯನವರೇ ಭಂಡತನ ಬಿಟ್ಟು ರಾಜೀನಾಮೆ ನೀಡಿ : ಬಿ.ವೈವಿಜಯೇಂದ್ರ

CM Siddaramaiah Should resign: BY vijayendra

ಬೆಂಗಳೂರು,ಸೆ.3- ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯಾಲಯದ ಆದೇಶವನ್ನು ಕಾಯುವ ಅಗತ್ಯವಾದರೂ ಏನಿದೆ? ಸರ್ಕಾರವೇ ನಿಮ್ಮ ಧರ್ಮಪತ್ನಿ (ಪಾರ್ವತಿ) ಅವರು ಪಡೆದಿರುವ ನಿವೇಶನಗಳು ಅಕ್ರಮ ಹಾಗೂ ನಿಯಮ ಬಾಹಿರ ಎಂದು ಹೇಳಿರುವಾಗ ಈಗಲಾದರೂ ತಮ ಭಂಡತನವನ್ನು ಪಕ್ಕಕ್ಕೆ ಸರಿಸಿ ತಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸ್ಥಾನದ ಘನತೆಗೆ ಬಂದಿರುವ ಚ್ಯುತಿಯನ್ನು ಹೋಗಲಾಡಿಸಿ, ಗೌರವ ಉಳಿಸಿಕೊಳ್ಳಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈವಿಜಯೇಂದ್ರ ಒತ್ತಾಯಿಸಿದ್ದಾರೆ.

ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿದ್ದರಾಮಯ್ಯ ವಿರುದ್ದ ಪೋಸ್ಟ್‌ ಮಾಡಿರುವ ಅವರು, ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ಕನಿಷ್ಟ ಈಗಲಾದರೂ ಲೂಟಿಕೋರ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಿದೆ. ಸರ್ಕಾರ ಈ ಕೂಡಲೇ 50:50ಅನುಪಾತದಲ್ಲಿ ಮುಡಾದಲ್ಲಿ ವಿತರಣೆಯಾಗಿರುವ ಸಾವಿರಾರು ನಿವೇಶನಗಳ ಕ್ರಯವನ್ನು ರದ್ದುಗೊಳಿಸಿ ಅಧಿಸೂಚನೆ ಹೊರಡಿಸಲಿ ಎಂದು ಆಗ್ರಹಿಸಿದ್ದಾರೆ.

ಶೇಕಡ 50:50ರ ಅನುಪಾತದಲ್ಲಿ ಪೂರ್ವಾನ್ವಯವಾಗಿ ನಿವೇಶನ ಪಡೆಯುವುದು ನಿಯಮಬಾಹಿರ ಎಂದು ನಮ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಿಸಿದ್ದ ತಾಂತ್ರಿಕ ಸಮಿತಿ ಕಳೆದ 3-11-2023 ರಂದೇ ಕಾಂಗ್ರೆಸ್‌‍ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿತ್ತು. ಈ ವರದಿಯಲ್ಲಿ ಮುಡಾದಲ್ಲಿ ನಡೆಯುತ್ತಿದ್ದ ಬ್ರಹಾಂಡ ಭ್ರಷ್ಟಾಚಾರಗಳ ಬಗ್ಗೆ ಪೂರ್ಣ ಮಾಹಿತಿಯನ್ನು ನೀಡಲಾಗಿತ್ತು ಎಂದು ಹೇಳಿದ್ದಾರೆ.

ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟ ಹಗರಣಗಳ ರಕ್ಷಣೆಯ ಪ್ರತೀಕವೆಂಬಂತೆ ಧೂಳು ಹಿಡಿದು ಕುಳಿತಿದ್ದ ತಾಂತ್ರಿಕ ಸಮಿತಿಯ ತನಿಖಾ ವರದಿಯ ಪ್ರತಿಯನ್ನು ನಾವು ಬಿಡುಗಡೆ ಮಾಡಿದ ನಂತರ ಗತ್ಯಂತರವಿಲ್ಲದೆ ಕೈಗೆತ್ತಿಕೊಂಡು ಇದೀಗ ಮುಡಾ ಬ್ರಹಾಂಡ ಭ್ರಷ್ಟಾಚಾರದ ರೂವಾರಿಗಳಲ್ಲೊಬ್ಬರಾದ ಹಿಂದಿನ ಆಯುಕ್ತ ಜಿ. ಟಿ.ದಿನೇಶ್‌ ಕುಮಾರ್‌ರನ್ನು ಅಮಾನತುಗೊಳಿಸಲಾಗಿದೆ.

ಅಮಾನತ್ತಿಗೆ ನೀಡಿರುವ ಕಾರಣಗಳಲ್ಲಿ ಶೇಕಡ 50:50ರ ಅನುಪಾತದಲ್ಲಿ ನಿಯಮ ಬಾಹಿರವಾಗಿ ನಿವೇಶನಗಳನ್ನು ವಿತರಿಸಿರುವ ಅಂಶವನ್ನು ಪ್ರಮುಖವಾಗಿ ಉಲ್ಲೇಖಿಸಲಾಗಿದೆ. ಇದು ಏನು ಹೇಳುತ್ತದೆ ಎಂದರೆ ಶೇ 50:50 ರ ಅನುಪಾತದಲ್ಲಿ ಪೂರ್ವನ್ವಯವಾಗಿ ಸಿದ್ದರಾಮಯ್ಯನವರ ಪತ್ನಿಯವರಿಗೆ ಮಂಜೂರಾಗಿರುವ 14 ನಿವೇಶನಗಳು ಸಂಪೂರ್ಣ ಅಕ್ರಮ ಹಾಗೂ ನಿಯಮಬಾಹಿರ ಎಂಬುದು ಸ್ಪಷ್ಟವಾಗಿದೆ. ವಿಚಿತ್ರವೆಂದರೆ ಮುಖ್ಯಮಂತ್ರಿಗಳ ಕುಟುಂಬಕ್ಕೆ 14 ನಿವೇಶನಗಳನ್ನು ಬಳುವಳಿ ನೀಡಿದ ಹಿಂದಿನ ಆಯುಕ್ತರೊಬ್ಬರ ವಿರುದ್ಧ ಯಾವುದೇ ಕ್ರಮ ಜರುಗಿಸದೇ ಋಣ ಸಂದಾಯ ಮಾಡಲಾಗಿದೆ ಎಂದು ವಿಜಯೇಂದ್ರ ಸಂಶಯ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News