Sunday, October 6, 2024
Homeರಾಜಕೀಯ | Politicsಸಿಎಂ ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡಬೇಕು : ಬಿಜೆಪಿ ನಾಯಕರ ಆಗ್ರಹ

ಸಿಎಂ ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ನೀಡಬೇಕು : ಬಿಜೆಪಿ ನಾಯಕರ ಆಗ್ರಹ

CM Siddaramaiah should resign with respect: BJP leaders demand

ಬೆಂಗಳೂರು,ಅ.1- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೌರವಯುತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಘನತೆಯನ್ನು ಉಳಿಸಿಕೊಳ್ಳಬೇಕೆಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಮತ್ತಿತರರು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಪಾರ್ವತಿ ಸಿದ್ದರಾಮಯ್ಯ ಅವರು ಬರೆದ ಪತ್ರದ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಹ್ಲಾದ್ ಜೋಷಿ, ಸಿದ್ದರಾಮಯ್ಯ ರಾಜೀನಾಮೆ ಕೊಡಿ ಅಂದರೆ ಸೈಟ್ ಕೊಟ್ಟಿದ್ದಾರೆ. ತಡವಾಗಿ ಜ್ಞಾನೋದಯವಾಗಿದೆ. ಕೇವಲ ಮುಡಾ ಸೈಟ್ ಅಲ್ಲ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ನಿವೇಶನ ವಾಪಸ್ ನೀಡುತ್ತೇವೆ ಎಂಬ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕೆಟ್ಟ ಮೇಲೆ ಬುದ್ಧಿ ಬಂತು ಎಂಬ ಗಾದೆ ಮಾತು ಮುಖ್ಯಮಂತ್ರಿಗಳಿಗೆ ಅನ್ವಯಿಸುತ್ತಿದೆ ಎಂದು ಕಾಲೆಳೆದಿದ್ದಾರೆ.
ಮುಖ್ಯಮಂತ್ರಿ ಮನೆಯವರು ಎಂದರೆ ಬಿಟ್ಟುಬಿಡಬೇಕಾ? 62 ಕೋಟಿ ಕೊಟ್ಟರೆ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಅಂದು ಆರ್ಭಟಿಸಿದ್ದ ಸಿದ್ದರಾಮಯ್ಯ ಅವರು ಇದೀಗ ಬೇಷರತ್ತಾಗಿ ಅವರ ಪತ್ನಿಯವರಿಂದ ನಿವೇಶನ ಹಿಂದಿರುಗಿಸುವ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಹೇಳಿದ್ದಾರೆ.

ನಿಮಗೆ ದೊರೆತ 14 ಅಕ್ರಮ ನಿವೇಶನಗಳು 5000 ಸಾವಿರಕ್ಕೂ ಹೆಚ್ಚು ನಿವೇಶನಗಳ ಲೂಟಿಕೋರತನಕ್ಕೆ ರಕ್ಷಣೆಯಾಗಿ ನಿಂತಿದೆ ಎಂದು ಆರೋಪಿಸಿ ಬಿಜೆಪಿ ನಡೆಸಿದ ಮೈಸೂರು ಚಲೋ ಪಾದಯಾತ್ರೆಗೆ ಪರ್ಯಾಯ ಸಮಾವೇಶ ಆಯೋಜಿಸಿ ಭಂಡತನದ ಸಮರ್ಥನೆಗಿಳಿದರು ಎಂದು ದೂರಿದ್ದಾರೆ.

ಸಾಮಾಜಿಕ ಕಾರ್ಯಕರ್ತರ ನ್ಯಾಯಾಲಯದ ಹೋರಾಟಕ್ಕೆ ಅಸ್ತು ಎಂದ ಘನತೆವೆತ್ತ ರಾಜ್ಯಪಾಲರನ್ನು ಅವಹೇಳನ ಮಾಡಿದರು. ಅವರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಹೋರಾಟ ಮಾಡಿದರು. ನ್ಯಾಯಾಲಯದಲ್ಲಿ ಜಯ ದೊರಕದ ಹಿನ್ನಲೆಯಲ್ಲಿ ಕಾನೂನಿನ ಕುಣಿಕೆ ಬಿಗಿತ ಹೆಚ್ಚಾದಂತೆ, ಸಿಬಿಐ-ಇಡಿ ತನಿಖೆಗಳ ನಿರೀಕ್ಷೆಯಿಂದ ಬೆದರಿದ ಮುಖ್ಯಮಂತ್ರಿಗಳು ಏಕಾಏಕಿ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರಕ್ಕೆ ಬಂದಿರುವುದು ಕಾನೂನು ಹೋರಾಟಕ್ಕೆ ಮುನ್ನವೇ ಅವರು ಶಸ ತ್ಯಜಿಸಿ ಶರಣಾಗತಿ ಪ್ರಕಟಿಸಿದಂತಾಗಿದೆ ಎಂದು ವ್ಯಂಗ್ಯವಾಡಿದರು.

ಹೀಗೆ ಮಾಡಿದರೆ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದು, ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬಹುದು ಎಂದು ಅಂದುಕೊಂಡಿದ್ದರೆ. ಅದು ಅವರ ಅಜ್ಞಾನವನ್ನು ಪ್ರತಿಬಿಂಬಿಸುತ್ತದೆ. ನೀವೇಶನಗಳನ್ನು ಹಿಂದಿರುಗಿಸಿ ತಪ್ಪೋಪ್ಪಿಕೊಂಡಂತೆ ಮುಖ್ಯಮಂತ್ರಿ ಸ್ಥಾನಕ್ಕೂ ರಾಜೀನಾಮೆ ನೀಡಿದರೆ ಮರೆತು ಹೋಗಿರುವ ತಮ್ಮ ನೈತಿಕತೆ ಪ್ರe್ಞÉ ಪ್ರದರ್ಶಿಸಿದಂತಾಗುತ್ತದೆ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

RELATED ARTICLES

Latest News