ಬೆಂಗಳೂರು, ಆ.21– ಮೈಸೂರು ದಸರಾದಲ್ಲಿ ಏರ್‌ಶೋ ನಡೆಸಲು ಅನುಮತಿಸಿರುವ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಮೈಸೂರು ದಸರಾದಲ್ಲಿ ವಾಯುಪಡೆಯಿಂದ ಏರ್‌ಶೋ ನಡೆಯಬೇಕೆಂಬುದು ಬಹುದಿನಗಳ ಕನಸಾಗಿತ್ತು. ಹಲವಾರು ಮುಖ್ಯಮಂತ್ರಿಗಳು ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ವಿಚಾರವಾಗಿ ವೈಯಕ್ತಿಕ ಆಸಕ್ತಿ ತೋರಿಸಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಮೂರು-ನಾಲ್ಕು ಬಾರಿ ಭೇಟಿಮಾಡಿ, ಒತ್ತಡ ಹಾಕಿದ್ದರು. ಕಳೆದ ವರ್ಷವೇ ಏರ್‌ಶೋಗೆ ಅನುಮತಿ ದೊರೆಯುವ ನಿರೀಕ್ಷೆಯಿತ್ತು, ಆದರೆ ಅದು ಸಾಧ್ಯವಾಗಲಿಲ್ಲ. ಈ ಬಾರಿ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಏರ್‌ಶೋಗೆ ಅನುಮತಿಸಿದ್ದಾರೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಪರವಾಗಿ ರಾಜ್‌ನಾಥ್ ಅವರನ್ನು ಅಭಿನಂದಿಸಿದ್ದಾರೆ.
ಮೈಸೂರು ದಸರಾ ನಾಡಿನ ಅಸಿತೆಯಾಗಿದೆ. ಐತಿಹಾಸಿಕವಾದ ಈ ಆಚರಣೆಯಲ್ಲಿ ಭಾರತೀಯ ವಾಯುಪಡೆಯು ಭಾಗಿಯಾಗುತ್ತಿರುವುದು ಅತ್ಯಂತ ಸಂತೋಷದ ವಿಷಯ ಎಂದು ಸಿಎಂ ಹೇಳಿದ್ದಾರೆ.ಏರ್ ಶೋದಿಂದಾಗಿ ದಸರಾದ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಮೈಸೂರು ದಸರಾಗೆ ರಾಜನಾಥ್‌ಸಿಂಗ್ ಅವರನ್ನು ಸಿದ್ದರಾಮಯ್ಯ ಅತೀಯವಾಗಿ ಆಹ್ವಾನಿಸಿದ್ದಾರೆ.
- ಬೆಂಗಳೂರಿನ ಮಿಲ್ಕ್ ಕಾಲೋನಿಯಲ್ಲಿ ಡೈಮಂಡ್ ಗಣಪತಿ
- ಕೊಳವೆ ಬಾವಿ ನೀರಿಗೆ ಟೆಲಿಮೆಟ್ರಿ ಅಳವಡಿಕೆ, ಟ್ಯಾಂಕರ್ಗಳಿಗೆ ಶುಲ್ಕ ವಿಧಿಸುವ ಕರ್ನಾಟಕ ಅಂತರ್ಜಲ ಕಾಯ್ದೆಗೆ ಅನುಮೋದನೆ
- ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಹೆಚ್.ಡಿ. ಕುಮಾರಸ್ವಾಮಿ
- ದೆಹಲಿ ಸಿಎಂ ರೇಖಾ ಗುಪ್ತಾಗೆ ಝಡ್+ ಭದ್ರತೆ
- ಏರ್‌ಶೋಗೆ ಅನುಮತಿ ನೀಡಿದ ರಾಜನಾಥ್‌ಸಿಂಗ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ