Saturday, July 27, 2024
Homeರಾಜ್ಯನಾಳೆ ಸಿಎಂ ಜನತಾ ದರ್ಶನ

ನಾಳೆ ಸಿಎಂ ಜನತಾ ದರ್ಶನ

ಬೆಂಗಳೂರು, ನ.26- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಬೆಳಿಗ್ಗೆ 9.30 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಜನರ ಬಳಿಗೇ ಆಡಳಿತ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಪ್ರತಿ ತಿಂಗಳು ಜನತಾ ದರ್ಶನ ನಡೆಸುವಂತೆ ಸೂಚಿಸಿದ್ದರು. ಇದೀಗ ಸ್ವತಃ ಮುಖ್ಯಮಂತ್ರಿ ಅವರು ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಜನತಾ ದರ್ಶನದ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಎಲ್ಲಾ ಉಪ ವಿಭಾಗಗಳ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿ ಹಾಜರಿರಲು ಸರ್ಕಾರ ನಿರ್ದೇಶನ ನೀಡಿದೆ.

ಭಯೋತ್ಪಾದನೆ ವಿರುದ್ಧದ ಭಾರತದ ಹೋರಾಟದಲ್ಲಿ ಇಸ್ರೇಲ್ ಕೈ ಜೋಡಿಸುತ್ತದೆ

ಈ ಸಂಬಂಧ ಮುಖ್ಯಮಂತ್ರಿಯವರ ಅಪರ ಮುಖ್ಯಕಾರ್ಯದರ್ಶಿ ಡಾ.ರಜನೀಶ್ ಗೋಯೆಲ್ ಎಲ್ಲಾ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ನಾಳೆ ಕೇಂದ್ರ ಸ್ಥಾನದಲ್ಲಿ ಹಾಜರಿದ್ದು, ಮುಖ್ಯಮಂತ್ರಿಯವರ ಕಚೇರಿಯಿಂದ ಮಾಡುವ ಕರೆಗಳನ್ನು ಸ್ವೀಕರಿಸಿ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಕುರಿತು ಅಗತ್ಯ ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ.

ರಾಜ್ಯದ ವಿವಿಧ ಸ್ಥಳಗಳಿಂದ ಅಹವಾಲುಗಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜನತಾ ದರ್ಶನಕ್ಕೆ ಆಗಮಿಸಲಿದ್ದಾರೆ. ಜನತಾ ದರ್ಶನದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಿ ಅಹವಾಲುಗಳ ಕುರಿತು ಸೂಕ್ತ ಪರಿಹಾರೋಪಾಯಗಳನ್ನು ಒದಗಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News