Sunday, September 15, 2024
Homeಇದೀಗ ಬಂದ ಸುದ್ದಿತುಂಗಭದ್ರಾ ಜಲಾಶಯಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆ.11- ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಕಟ್‌ ಘಟನೆ ಕುರಿತಂತೆ ಜಲ ಸಂಪನೂಲ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.

ಮುಖ್ಯಮಂತ್ರಿಗಳು ಮಂಗಳವಾರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯ ತಿಳಿಸಿದೆ.ಇಂದು ಬೆಳಗ್ಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್‌ ಗುಪ್ತ ಅವರೊಂದಿಗೆ ಮಾತುಕತೆ ನಡೆಸಿದ ಮುಖ್ಯಮಂತ್ರಿಯವರು ಸಂಪೂರ್ಣ ವಿವರ ಪಡೆದರು. ಯಾವುದೇ ಹಾನಿ ಸಂಭವಿಸದಂತೆ ಮುಂಜಾಗ್ರತೆ ವಹಿಸುವಂತೆ ಸೂಚಿಸಿದ್ದಾರೆ.

ಜಲ ಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್‌ ಅಹಮದ್‌ ಖಾನ್‌, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್‌ ತಂಗಡಗಿ ಅವರೊಂದಿಗೂ ಸಿಎಂ ಚರ್ಚಿಸಿದರು.

RELATED ARTICLES

Latest News