Thursday, January 23, 2025
Homeರಾಜ್ಯರಾಮೇಶ್ವರಂ ಕೆಫೆ ಸ್ಪೋಟ : ಗಾಯಾಳುಗಳಿಗೆ ಸಿಎಂ ಸಾಂತ್ವನ

ರಾಮೇಶ್ವರಂ ಕೆಫೆ ಸ್ಪೋಟ : ಗಾಯಾಳುಗಳಿಗೆ ಸಿಎಂ ಸಾಂತ್ವನ

ಬೆಂಗಳೂರು,ಮಾ.2- ನಗರದ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಸ್ಪೋಟದಿಂದ ಗಾಯಗೊಂಡವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಮೈಸೂರಿನಿಂದ ಬೆಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಯವರು ನೇರವಾಗಿ ಆಸ್ಪತ್ರೆಗೆ ತೆರಳಿದರು. ಅಲ್ಲಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಇದೇ ವೇಳೆ ರೋಗಿಗಳ ಜೊತೆಯೂ ಸಿದ್ದರಾಮಯ್ಯ ಚರ್ಚೆ ನಡೆಸಿದರು. ಧೈರ್ಯವಾಗಿರಿ. ಸರ್ಕಾರ ನಿಮ್ಮೊಂದಿಗಿದೆ ಎಂದು ಸಾಂತ್ವನ ಹೇಳಿದರು. ಗಾಯಗೊಂಡವರ ಕುಟುಂಬದ ಸದಸ್ಯರ ಜೊತೆ ಕೂಡಾ ಮಾತುಕತೆ ನಡೆಸಿದರು. ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಈಗಾಗಲೇ ಹೇಳಿಕೆ ನೀಡಲಾಗಿದೆ. ಬಳಿಕ ಘಟನಾ ಸ್ಥಳಕ್ಕೆ ಪರಿಶೀಲನೆ ನಡೆಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ನಿನ್ನೆ ರಾತ್ರಿಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಇಂದು ಬೆಳಿಗ್ಗೆ ಮುಖ್ಯಮಂತ್ರಿಯವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

RELATED ARTICLES

Latest News