Wednesday, December 18, 2024
Homeರಾಜ್ಯಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

CM Siddaramaiah's anger against Amit Shah

ಬೆಳಗಾವಿ,ಡಿ.18- ಡಾ.ಬಿ.ಆರ್. ಅಂಬೇಡ್ಕರ್ರವರ ನಿತ್ಯ ಸರಣೆ ಒಂದು ವ್ಯಸನ ಎನ್ನುವ ಮೂಲಕ ಕೇಂದ್ರ ಗೃಹಸಚಿವ ಅಮಿತ್ ಶಾ ತಮ ಅಂತರಂಗದ ಅಭಿಪ್ರಾಯಗಳನ್ನು ಹೊರಹಾಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಬರೆದಿರುವ ಮುಖ್ಯಮಂತ್ರಿಯವರು, ಮೊದಲಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಭಾರತೀಯ ಜನತಾ ಪಕ್ಷದ ಅಂತರಂಗದ ಅಭಿಪ್ರಾಯವನ್ನು ಬಹಿರಂಗವಾಗಿ ಧೈರ್ಯದಿಂದ ದೇಶದ ಮುಂದೆ ತೆರೆದಿಟ್ಟದ್ದಕ್ಕಾಗಿ ಮತ್ತು ಕೊನೆಗೂ ನಿಮ ಜೀವಮಾನದಲ್ಲಿ ಒಂದು ಸತ್ಯವನ್ನಾದರೂ ಹೇಳಿದ್ದಕ್ಕೆ ನಿಮನ್ನು ಅಭಿನಂದಿಸುತ್ತೇನೆ.

ನಿಮ ಮಾತಿನಿಂದ ನಮಗೆ ಆಶ್ಚರ್ಯವಾಗಿಲ್ಲ, ನಮಗೆ ಇದು ಗೊತ್ತಿತ್ತು. ಸಂಸತ್ ನಲ್ಲಿ (18-12-2024) ಆಡಿದ ನಿಮ ಮಾತಿನಿಂದ ಇಡೀ ದೇಶಕ್ಕೆ ನಿಮ ಅಂತರಂಗದ ಅರಿವಾಗಿದೆ.. ಬಾಬಾಸಾಹೇಬ್ ಅವರು ಕೊಟ್ಟ ಸಂವಿಧಾನದಡಿಯಲ್ಲಿಯೇ ಕಾರ್ಯನಿರ್ವಹಿಸುತ್ತಿರುವ ಸಂಸತ್ ನಲ್ಲಿ ನಿಂತು ಅವರ ಸರಣೆಯನ್ನು ವ್ಯಸನ ಎಂದು ತುಚ್ಛೀಕರಿಸುವ ನಿಮ ಧಾಷ್ಟ್ರಕ್ಕೆ ಶಹಭಾಸ್ ಅನ್ನಲೇಬೇಕು ಎಂದು ಹೇಳಿದ್ದಾರೆ.

ಅಮಿತ್ ಶಹಾ ಅವರೇ, ಬಾಬಾಸಾಹೇಬರ ಬಗ್ಗೆ ತಮಗೆ ಅಪಾರ ಅಭಿಮಾನ ಇದೆ, ಗೌರವ ಇದೆ, ನನ್ನ ಮಾತುಗಳನ್ನು ತಿರುಚಲಾಗಿದೆ ಎಂದೆಲ್ಲ ಸ್ಪಷ್ಟೀಕರಣ ಕೊಟ್ಟು ಆತವಂಚನೆ ಮಾಡಿಕೊಳ್ಳಬೇಡಿ. ಅದನ್ನು ಸಮರ್ಥಿಸಿಕೊಂಡು ದೇಶವನ್ನು ಎದುರಿಸಿ ಎಂದಿದ್ದಾರೆ.
ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸರಣೆ. ನಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸರಣೆ ಇರಲಿದೆ.

ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ ದುರಹಂಕಾರದ ಮಾತಿಗೆ ನಿಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ ಎಂದು ಹೇಳಿದ್ದಾರೆ.

ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ನನಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ನಾನು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು. ನಮ ಪಕ್ಷದ ಹಿರಿಯ ನಾಯಕರಾದ ಸನಾನ್ಯ ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು.

ಈ ವಾಸ್ತವ ಸದಾ ನಮ ನೆನಪಲ್ಲಿರುತ್ತದೆ. ನೀವು ಹೇಳುವ ವ್ಯಸನ ನಮ ಪಾಲಿನ ಅಂಬೇಡ್ಕರ್ ಸರಣೆ, ನಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ ಎಂದಿದ್ದಾರೆ.

ನಾನು ಮಾತ್ರ ಅಲ್ಲ, ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇರುತ್ತಿದ್ದರೆ ನೀವು ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ. ನೀವು ನಿಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ಮತ್ತು ನಿಮ ಸಹದ್ಯೋಗಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೇ ಸ್ಟೇಷನ್ ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ. ಇದನ್ನು ಪ್ರಧಾನಿಯವರೂ ಒಪ್ಪಿಕೊಳ್ಳಬಹುದು ಎಂದು ನಂಬಿದ್ದೇನೆ, ನೀವೂ ಒಪ್ಪಿಕೊಂಡು ಬಿಡಿ ಎಂದು ತಿಳಿಸಿದ್ದಾರೆ.

ಅಮಿತ ಶಾ ಅವರೇ, ಇತಿಹಾಸವನ್ನು ಓದಿರುವ ನಮಂತಹವರಿಗೆ ನಿಮೊಳಗಿನ ಅಂಬೇಡ್ಕರ್ ದ್ವೇಷ ಹೊಸದಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಬರೆದಿರುವ ದೇಶದ ಸಂವಿಧಾನವನ್ನು ಅವರು ಬದುಕಿರುವಾಗಲೇ ನಿಮ ಮಾತೃಸಂಸ್ಥೆಯಾದ ಆರ್ಎಸ್ಎಸ್ ಯಾಕೆ ತಿರಸ್ಕರಿಸಿತ್ತು? ಆರ್ಎಸ್ಎಸ್ ನಾಯಕರಾಗಿದ್ದ ಹೆಡಗೆವಾರ್, ಗೋಲ್ವಾಲ್ಕರ್ ಮತ್ತು ಸಾವರ್ಕರ್ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆಗಳೇನು ಎನ್ನುವ ವಿವರಗಳೆಲ್ಲ ಇತಿಹಾಸದ ಪುಟಗಳಲ್ಲಿ ಇವೆ.

ನಿಮ ಸುಳ್ಳುಗಳು ಮತ್ತು ಆತವಂಚನೆಯ ನಡವಳಿಕೆಗಳಿಂದ ಅದನ್ನು ಮರೆಮಾಚಬಹುದು, ಆದರೆ ಅಳಿಸಿಹಾಕಲಾಗುವುದಿಲ್ಲ ಎನ್ನುವುದು ನೆನಪಿರಲಿ. ಆ ಅಭಿಪ್ರಾಯವನ್ನೇ ನೀವು ಸಂಸತ್ ನಲ್ಲಿ ಆಡಿದ್ದೀರಿ ಎಂದು ಹೇಳಿದ್ದಾರೆ.

ನಿಮ ಮಾತಿನ ಧಾಟಿಯಲ್ಲಿಯೇ ಪ್ರತಿಕ್ರಿಯಿಸುತ್ತೇನೆ. ನಿಮ ಪಕ್ಷ ಮತ್ತು ಅದರ ಹಿಂದಿರುವ ಪರಿವಾರಕ್ಕೆ ಇತ್ತೀಚೆಗೆ ಮೋದಿಮೋದಿ ಮೋದಿ ಎಂದು ಹೇಳುವುದು ಒಂದು ವ್ಯಸನ ಆಗಿದೆ. ಮೋದಿಯವರ ಬದಲಿಗೆ ಅಷ್ಟು ಬಾರಿ ದೇವರ ನಾಮ ಸರಣೆ ಮಾಡಿದ್ದರೆ ಏಳು ಜನದಲ್ಲಿ ಮಾತ್ರ ಅಲ್ಲ, ನೂರು ಜನದಲ್ಲಿಯೂ ನಿಮಗೆ ಸ್ವರ್ಗವೇ ಸಿಗುತ್ತಿತ್ತು, ಕೇವಲ ಅಧಿಕಾರದಲ್ಲಿ ಉಳಿಯಲಿಕ್ಕಾಗಿ ಮಾಡಿರುವ ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು ಎಂದಿದ್ದಾರೆ.

RELATED ARTICLES

Latest News