ಬೆಂಗಳೂರು, ಅ.7- ಬಿಬಿಎಂಪಿ ಹೋಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ಥಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಬಿಎ ಅಧಿಕಾರಿಗಳೊಂದಿಗೆ ಸಭೆ ನಡೆಸಲು ತೀರ್ಮಾನಿಸಿದ್ದಾರೆ.
ಇದೇ 10ರಂದು ಜಿಬಿಎ ಕಚೇರಿಯಲ್ಲಿರುವ ಕೆಂಪೇಗೌಡ ಸಭಾಂಗಣದಲ್ಲಿ ಸಿದ್ದರಾಮಯ್ಯ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಿ 5 ನಗರ ಪಾಲಿಕೆಗಳನ್ನು ಸೃಜಿಸಲಾಗಿದೆ.
ಈ ಐದು ನಗರ ಪಾಲಿಕೆಗಳಿಗೆ ಶೀಘ್ರ ಚುನಾವಣೆ ನಡೆಸಬೇಕಿರುವುದರಿಂದ ಜಿಬಿಎ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಭೆ ನಡೆಸುತ್ತಿದ್ದಾರೆ.ಸಭೆಯಲ್ಲಿ ಜಿಬಿಎ ಉಪಾಧ್ಯಕ್ಷರಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ನಗರವನ್ನು ಪ್ರತಿನಿಧಿಸುವ ಶಾಸಕರು ಪಾಲ್ಗೊಳ್ಳುತ್ತಿದ್ದಾರೆ.