ಒಡಿಶಾದಲ್ಲಿ ಹಾಕಿ ವಿಶ್ವಕಪ್ : ದೇಶದ ಎಲ್ಲಾ ಸಿಎಂಗಳಿಗೆ ಆಹ್ವಾನ

Social Share

ಭುವನೇಶ್ವರ್, ಡಿ .23 – ಮುಂದಿನ ಜನವರಿ 13-29 ರವರೆಗೆ ಒಡಿಶಾದಲ್ಲಿ ನಡೆಯಲಿರುವ ಪುರುಷರ ಹಾಕಿ ವಿಶ್ವಕಪ್‍ಗೆ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗುವುದು ಎಂದು ಸಿಎಂ ನವೀನ್ ಪಟ್ನಾಯಕ್ ತಿಳಿಸಿದ್ದಾರೆ.

ಕ್ರೀಡಾ ಸಂಭ್ರಮಕ್ಕೂ ಮುನ್ನ ಇಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಆಡಳಿತಾರೂಢ ಬಿಜೆಡಿ, ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಸಮಾಜವಾದಿ ಪಕ್ಷ, ಆರ್‍ಜೆಡಿ ಮತ್ತು ಎಎಪಿಯ ಪ್ರತಿನಿಧಿಗಳು ಭಾಗವಹಿಸಿ ಚರ್ಚೆ ವೇಳೆ ಸಿಎಂ ಪಟ್ನಾಯಕ್ ಈ ಘೋಷಣೆ ಮಾಡಿದರು.

ಬೆಂಗಳೂರು ವಿವಿ ಆವರಣದಲ್ಲಿ ಮಾಸ್ಕ್ ಕಡ್ಡಾಯ

ಅಂತರಾಷ್ಟ್ರೀಯ ಪಂದ್ಯಾವಳಿಯನ್ನು ಸುಗಮವಾಗಿ ನಡೆಸಲು ಎಲ್ಲಾ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಿದ ಅವರು ನಾವು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಈ ನಿರ್ಧಾರಕ್ಕೆ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಹಾಕಿ ಪಂದ್ಯಾವಳಿ ಆಯೋಜಿಸಲು ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಿದ ಕೇಂದ್ರಕ್ಕೆ, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಟ್ನಾಯಕ್ ಧನ್ಯವಾದ ಅರ್ಪಿಸಿದ್ದು ಇದು ಕೇವಲ ಒಡಿಶಾ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ ರಾಷ್ಟ್ರಕ್ಕೆ ಪ್ರತಿಷ್ಠೆಯ ವಿಷಯವಾಗಿದೆ ಎಂದು ಅವರು ಹೇಳಿದರು.

ಆದ್ದರಿಂದ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು. ಪಂದ್ಯಾವಳಿಯು ಭುವನೇಶ್ವರದ ಕಳಿಂಗ ಕ್ರೀಡಾಂಗಣ ಮತ್ತು ರೂರ್ಕೆಲಾದ ಬಿರ್ಸಾ ಮುಂಡಾ ಸ್ಟೇಡಿಯಂನಲ್ಲಿ ನಡೆಯಲಿದೆ.

ಬಿಜೆಪಿಗೆ ಬಿಸಿ ತುಪ್ಪವಾದ ಫ್ಯಾಮಿಲಿ ಪಾಲಿಟಿಕ್ಸ್

ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿ, ರಾಜ್ಯಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದರು.

All states CMs invited, Odisha, Hockey World Cup,

Articles You Might Like

Share This Article