40ಕ್ಕೂ ಹೆಚ್ಚು ಅಕ್ರಮ ಗಣಿಗಳ ಮೇಲೆ ಸಿಬಿಐ ದಾಳಿ

ನವದೆಹಲಿ, ನ.28- ಮೂರು ರಾಜ್ಯಗಳಲ್ಲಿ ನಡೆಸಲಾಗುತ್ತಿರುವ ಅಕ್ರಮ ಗಣಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳ ಸೇರಿದಂತೆ ಮೂರು ರಾಜ್ಯಗಳಲ್ಲಿ ನಡೆಯುತ್ತಿರುವ 40ಕ್ಕೂ ಹೆಚ್ಚು ಅಕ್ರಮ ಗಣಿಗಳ ಮೇಲೆ ಬೆಳ್ಳಂ ಬೆಳಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಾ ದೇಶದ ಬೊಕ್ಕಸಕ್ಕೆ ಕೋಟ್ಯಂತರ ರೂ. ವಂಚಿಸುತ್ತಿದ್ದಾರೆ ಎಂಬ ದೂರನ್ನು ಆಧರಿಸಿ ಸಿಬಿಐ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.

ಇನ್ನು ಕೆಲ ದಿನಗಳ ಕಾಲ ದಾಳಿ ಮುಂದುವರೆಯಲಿದ್ದು , ದಾಳಿ ನಂತರ ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡಿರುವ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.