Thursday, November 21, 2024
Homeರಾಜ್ಯನೀತಿ ಸಂಹಿತೆ: ಬೆಂಗಳೂರಿನಾದ್ಯಂತ ಕಟ್ಟೆಚ್ಚರ

ನೀತಿ ಸಂಹಿತೆ: ಬೆಂಗಳೂರಿನಾದ್ಯಂತ ಕಟ್ಟೆಚ್ಚರ

ಬೆಂಗಳೂರು,ಮಾ.18- ಲೋಕಸಭೆ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಾದ ಹಿನ್ನಲೆಯಲ್ಲಿ ನಗರ ಪೊಲೀಸರು ನಗರದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ 3ರಂತೆ ನಗರಾದ್ಯಂತ 100ಕ್ಕೂ ಹೆಚ್ಚು ಚೆಕ್‍ಪೋಸ್ಟ್‍ಗಳನ್ನು ನಿರ್ಮಿಸಲಾಗುತ್ತಿದೆ. ನಗರದಲ್ಲಿ ಈಗಾಗಲೇ ಕೆಲವು ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ತೆರೆದು ವಾಹನಗಳ ಪರಿಶೀಲನೆ ನಡೆಸಲಾಗುತ್ತಿದೆ.

ಉತ್ತರ ವಿಭಾಗದಲ್ಲಿ 20, ಪಶ್ಚಿಮ 22, ಕೇಂದ್ರ ವಿಭಾಗದಲ್ಲಿ 22 ಚೆಕ್‍ಪೋಸ್ಟ್ ಗಳನ್ನು ತೆರೆಯಲಾಗಿದ್ದು, ಈ ಚೆಕ್‍ಪೋಸ್ಟ್‍ಗಳಲ್ಲಿ ಅಕಾರಿ ಮತ್ತು ಸಿಬ್ಬಂದಿಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತಾರೆ.
ಚೆಕ್‍ಪೋಸ್ಟ್‍ಗಳಲ್ಲಿ ಪೊಲೀಸರ ಜೊತೆಗೆ ಬಿಬಿಎಂಪಿ, ಆರ್‍ಟಿಒ ಅಬಕಾರಿ, ಕಮರ್ಷಿಯಲ್ ಟಾಕ್ಸ್ ಅಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಇರುತ್ತಾರೆ.

ಚೆಕ್‍ಪೋಸ್ಟ್ ಮಾರ್ಗವಾಗಿ ಬರುವಂತಹ ಎಲ್ಲ ವಾಹನಗಳನ್ನು ಸಂಪೂರ್ಣ ಪರಿಶೀಲಿಸಲಾಗುತ್ತಿದ್ದು, ಅಕ್ರಮವಾಗಿ ಹಣ, ಮದ್ಯ, ದಾಖಲೆ ಇಲ್ಲದ ವಸ್ತುಗಳನ್ನು ಸಾಗಿಸುವುದು ಕಂಡುಬಂದರೆ ಅವುಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ. ಒಂದು ವೇಳೆ ಸಾಗಿಸುವ ಹಣ ಅಥವಾ ವಸ್ತುಗಳಿಗೆ ಸೂಕ್ತ ದಾಖಲೆ ಒದಗಿಸಿದರೆ ಅವುಗಳನ್ನು ಹಿಂದಿರುಗಿಸಲಾಗುತ್ತದೆ.

ಕ್ಷೇತ್ರ ಹಂಚಿಕೆ ಗೊಂದಲವಿಲ್ಲ : ಜಿ.ಟಿ.ದೇವೇಗೌಡ

ನೀತಿ ಸಂಹಿತೆ ಜಾರಿಯಾದ ಮೊದಲ ದಿನವಾದ ನಿನ್ನೆ ಅಶೋಕನಗರ ಪೊಲೀಸ್ ಠಾಣೆಯ ರೆಸಿಡೆನ್ಸಿ ರಸ್ತೆಯ ಚೆಕ್‍ಫೋಸ್ಟ್‍ನಲ್ಲಿ ವಾಹನಗಳ ತಪಾಸಣೆ ವೇಳೆ ಕಾರಿನಲ್ಲಿ 13.16 ಲಕ್ಷ ದಾಖಲೆ ಇಲ್ಲದ ಹಣ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಒಟ್ಟಾರೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ನಗರದೆಲ್ಲೆಡೆ ಖಾಕಿ ಕಣ್ಗಾವಲಿದ್ದು, ಮುಕ್ತ ಹಾಗೂ ಶಾಂತಿಯುತ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

RELATED ARTICLES

Latest News