ಬೆಂಗಳೂರು, ಜ.2- ನಿರಂತರ ಮಳೆಯಿಂದ ಬೇಸತ್ತಿದ್ದ ರಾಜ್ಯದ ಜನರು ಈಗ ಮೈ ಕೊರೆಯುವ ಚಳಿಯನ್ನು ಸಹಿಸಿಕೊಳ್ಳಬೇಕಿದೆ. ಸಧ್ಯಕ್ಕೆ ಮಳೆಯ ಸಮಸ್ಯೆ ಇಲ್ಲ. ಆದರೆ, ಕನಿಷ್ಠ ತಾಪಮಾನ ಇಳಿಕೆಯಾಗುತ್ತಿರುವುದರಿಂದ ಚಳಿಯ ತೀವ್ರತೆ ಹೆಚ್ಚಾಗಲಿದೆ.
ಇನ್ನೆರಡು ವಾರಗಳ ಕಾಲ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಹಗಲು ವೇಳೆ ತೀವ್ರವಾದ ಬಿಸಿಲು ಕಂಡುಬರಲಿದ್ದು,ರಾತ್ರಿ ವೇಳೆ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ. ಆದರೆ, ಬೆಳಿಗ್ಗೆ ಕೆಲವೆಡೆ ಮಂಜು ಕವಿಯುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಕನಿಷ್ಠ ತಾಪಮಾನ ಸರಾಸರಿ 14ರಿಂದ 16ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗುತ್ತಿದೆ. ಗರಿಷ್ಠ ತಾಪಮಾನವು 26ರಿಂದ 29 ಡಿಗ್ರಿ ಸೆಲ್ಸಿಯಸ್ವರೆಗೂ ದಾಖಲಾಗುತ್ತಿದೆ. ರಾಜ್ಯದಲ್ಲಿ ಈ ಬಾರಿಯ ಮುಂಗಾರು ಹಾಗೂ ಹಿಂಗಾರು ಮಳೆ ವಾಡಿಕೆಗಿಂತ ಹೆಚ್ಚಾಗಿದ್ದು, ವಾತಾವರಣದಲ್ಲಿ ತೇವಾಂಶವೂ ಆಧಿಕವಾಗಿದೆ. ಬಹಳಷ್ಟು ಕಡೆ ಬೆಳಗಿನ ಜಾವ ಸಾಕಷ್ಟು ಇಬ್ಬನಿಯೂ ಬೀಳಲಿದೆ.
ದಕ್ಷಿಣದಲ್ಲಿ ಕಮಲ ಅರಳಿಸಲು ಮೋದಿ, ಶಾ ಮಾಸ್ಟರ್ ಪ್ಲಾನ್
ಕಳೆದ ಬಾರಿಯಂತೆ ಈ ಬಾರಿಯೂ ಡಿಸೆಂಬರ್ವರೆಗೂ ಮಳೆ ಮುಂದುವರೆದಿದೆ. ಇದರಿಂದಾಗಿ ಜನವರಿಯಲ್ಲಿ ಚಳಿಯ ಪ್ರಮಾಣ ಹೆಚ್ಚಾಗಲಿದೆ. ಕೆಲವೆಡೆ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದೆ. ಮಕರ ಸಂಕ್ರಾಂತಿ ಹಬ್ಬದ ವರೆಗೂ ಮಾಗಿಯ ಚಳಿಯ ತೀವ್ರತೆ ಹೆಚ್ಚಾಗಿರಲಿದೆ. ಆ ನಂತರ ಚಳಿಯ ಪ್ರಮಾಣ ಇಳಿಕೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14-ರಿಂದ 16 ಡಿಗ್ರಿ ಸೆಲ್ಸಿಯಸ್ ವರೆಗೂ ದಾಖಲಾಗುತ್ತಿದೆ. ಈ ವಾರ ಕನಿಷ್ಠ ತಾಪಮಾನ ಮತ್ತಷ್ಟು ಇಳಿಕೆಯಾಗುವ ಸಂಭವ ಹೆಚ್ಚಾಗಿದೆ. ಇದರಿಂದ ಸಂಜೆ, ರಾತ್ರಿ ಹಾಗೂ ಬೆಳಿಗ್ಗೆ ತೀವ್ರವಾದ ಚಳಿ ಇರಲಿದೆ ಎಂದು ತಜ್ಞರು ಹೇಳಿದ್ದಾರೆ.
ನೋಟು ಅಮಾನೀಕರಣ ಮಾನ್ಯ ಮಾಡಿದ ಸುಪ್ರೀಂ
ಚಳಿಗಾಲ ನವೆಂಬರ್ ನಿಂದ ಪ್ರಾರಂಭವಾಗಿ ಫೆಬ್ರವರಿಯ ವೇಳೆಗೆ ಮುಕ್ತಾಯವಾದರೂ, ಚಂಡ ಮಾರುತ, ವಾಯುಭಾರ ಕುಸಿತ ಹಾಗೂ ಮೈಲ್ಮೈ ಸುಳಿಗಾಳಿಗಳಿಂದಾಗಿ ಹಿಂಗಾರು ಮಳೆ ಡಿಸೆಂಬರ್ ವರೆಗೂ ಮುಂದುವರೆದಿತ್ತು. ಅಲ್ಲದೆ, ಪದೇ ಪದೇ ನಿರಂತರ ಜಿಟಿ ಜಿಟಿ ಮಳೆಯಾಗುತ್ತಿತ್ತು. ಆ ಸಂದರ್ಭದಲ್ಲಿ ಮೈ ಕೊರೆಯುವ ಚಳಿಯ ತೀವ್ರತೆಯ ಅನುಭವ ಉಂಟಾಗಿತ್ತು.
cold weather, bangalore,