ಬೆಂಗಳೂರು, ಆ.16- ಕಾಲೇಜು ವಿದ್ಯಾರ್ಥಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಜಿ ಹಳ್ಳಿ ಪೊಲೀಸರು ಮೂವರು ಆರೋಪಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎಚ್‍ಬಿಆರ್ ಲೇಔಟ್‍ನ ಪ್ರೊವಿನ್ಸ್ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್ ಸಾದ್ ಸೇರಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ಆ. 11ರಂದು ಈ ಕಾಲೇಜಿನಲ್ಲಿ ಸಾಂಸ್ಕøತಿಕ ಕಾರ್ಯಕ್ರಮ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ದ್ವಿತಿಯ ಪಿಯುಸಿ ವಿದ್ಯಾರ್ಥಿ ಅರ್ಬಾಜ್ ಜೊತೆ ಬಿಕಾಂ ವಿದ್ಯಾರ್ಥಿ ಸಾದ್ ಜಗಳವಾಡಿ ಮಾರನೇ ದಿನ ಹೊರಗಿನವರನ್ನು ಕರೆಸಿಕೊಂಡು, ಸಂಜೆ ಕಾಲೇಜು ಮುಗಿಸಿಕೊಂಡು ಅರ್ಬಾಜ್ ಮನೆಗೆ ನಡೆದು ಹೋಗುತ್ತಿದ್ದಾಗ ಏಕಾಏಕಿ ದಾಳಿ ಮಾಡಿ ಆತನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಂಡ ಕೆಜಿ ಹಳ್ಳಿ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.