ನವದೆಹಲಿ,ಫೆ.3 – ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆ ಕುರಿತು ಕೇಂದ್ರ ಸರ್ಕಾರದ ಧೋರಣೆ ಬಗ್ಗೆ ಉನ್ನತ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನಮ್ಮನ್ನು ಅನಾನುಕೂಲ ನಿಲುವು ತೆಗೆದುಕೊಳ್ಳುವ ಪರಿಸ್ಥಿತಿಗೆ ದೂಡಬೇಡಿ ಎಂದು ಎಚ್ಚರಿಕೆ ನೀಡಿದೆ.
ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿಗೆ ನ್ಯಾಯಮೂರ್ತಿಗಳನ್ನು ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದ್ದ ಹೆಸರುಗಳಿಗೆ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಸಲ್ಲಿಸಲಾಗಿರುವ ಅರ್ಜಿಗಳನ್ನು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಎ.ಎಸ್.ಓಕಾ ಅವರ ಪೀಠ ವಿಚಾರಣೆ ನಡೆಸುತ್ತಿದೆ.
ಇಂದು ನ್ಯಾಯಾಲಯದ ಮುಂದೆ ಹಾಜರಾದ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರು ಸುಪ್ರೀಂ ಕೋರ್ಟಿಗೆ ಐವರು ನ್ಯಾಯಮೂರ್ತಿಗಳ ನೇಮಕಾತಿಗೆ ಶೀಘ್ರವೇ ಕೇಂದ್ರಸರ್ಕಾರ ಅನುಮತಿ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.
ಸಿಎಂ ಬೊಮ್ಮಾಯಿಗೆ ತಲೆನೋವಾದ ಸಿಡಿ ಪ್ರಕರಣ
ಕೇಂದ್ರದ ನಿಲುವುಗಳ ಬಗ್ಗೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇದು ಅತ್ಯಂತ ಗಂಭೀರವಾದ ವಿಷಯ. ನಮ್ಮನ್ನು ಅನಾನುಕೂಲಕರವಾದ ನಿಲುವು ತೆಗೆದುಕೊಳ್ಳುವಂತೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದೆ.
ಕೊಲಿಜಿಯಂ ಕಳೆದ ಡಿ.13 ರಂದು ಹೈಕೋರ್ಟ್‍ನಿಂದ ಐವರು ಮುಖ್ಯ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟಿಗೆ ನೇಮಿಸಲು ಶಿಫಾರಸು ಮಾಡಿತ್ತು.
ನೆಲಮಂಗಲ ನಗರಸಭೆ ಅಧ್ಯಕ್ಷರ ರಾಜಕೀಯ ಭವಿಷ್ಯಕ್ಕೆ ಅರ್ಧಚಂದ್ರ
ಅದರಲ್ಲಿ ರಾಜಸ್ತಾನದ ಹೈಕೋರ್ಟಿನ ಪಂಕಜ್ ಮಿಥಾಲ್, ಬಿಹಾರದ ಹೈಕೋರ್ಟಿನ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್‍ನ ಪಿ.ವಿ. ಸಂಜಯ್ ಕುಮಾರ್, ಅಲಹಬಾದ್ ಹೈಕೋರ್ಟ್‍ನ ಮನೋಜ್ ಮಿಶ್ರಾ, ಮತ್ತೊಬ್ಬ ಮುಖ್ಯ ನ್ಯಾಯಮೂರ್ತಿ ಅಸಾದುದ್ದಿನ್ ಅಮಾನುಲ್ಲಾ ಅವರನ್ನು ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾಗಿ ನೇಮಿಸಲು ಶಿಫಾರಸು ಮಾಡಲಾಗಿದೆ.
Collegium, recommends, names, Supreme Court, judges,