ಗಾಂಧಿನಗರ, ಮೇ 26- ಪಾಕಿಸ್ತಾನದ ವಿರುದ್ದ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ದೇಶವೇ ಹೆಮೆ ಪಡುವಂತೆ ಮಾಡಿದ್ದ ಭಾರತೀಯ ಸೇನಾ ಪಡೆಯ ಕರ್ನಲ್ ಸೋಫಿಯಾ ಖುರೇಷಿ ಕುಟುಂಬದ ಸದಸ್ಯರು ಗುಜರಾತ್‌ನ ವಡೋದರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮೋದಿ ಅವರ ಮೇಲೆ ಹೂವಿನ ಸುರಿಮಳೆಗೈದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರಧಾನಿ ಮೋದಿ ಅವರು ಹತ್ತಿರ ಬರುತ್ತಿದ್ದಾಗ ಸೋಫಿಯಾ ತಾಯಿ ಹಲೀಮಾ ಬೀಬಿ ಸೇರಿದಂತೆ ಕುಟುಂಬ ಸದಸ್ಯರು ಪುಷ್ಪವೃಷ್ಟಿ ಮಾಡಿ ಸ್ವಾಗತಿಸಿದರು.
ಮಾಧ್ಯಮದ ಜೊತೆ ಮಾತನಾಡಿದ ಹಲೀಮಾ ಬೀಬಿ, ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದನ್ನು ನೋಡಿ ಸಂತೋಷವಾಯಿತು. ಮಹಿಳೆಯರು ಮತ್ತು ಸಹೋದರಿಯರು ಆಪರೇಷನ್ ಸಿಂಧೂರ ಬಗ್ಗೆ ಸಂತೋಷಪಟ್ಟಿದ್ದಾರೆ ಎಂದು ತಿಳಿಸಿದರು.
ಕರ್ನಲ್ ಸೋಫಿಯಾ ಖುರೇಷಿ ಅವರ ಅವಳಿ ಸಹೋದರಿ ಶೈನಾ ಸುನ್ಸಾರಾ ಮಾತನಾಡಿ, ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ಅವರು ಬಹಳಷ್ಟು ಕೆಲಸ ಮಾಡಿದ್ದಾರೆ. ಸೋಫಿಯಾ ನನ್ನ ಅವಳಿ ಸಹೋದರಿ. ಸಹೋದರಿ ದೇಶಕ್ಕಾಗಿ ಏನಾದರೂ ಮಾಡಿದಾಗ, ಅದು ನನಗೆ ಮಾತ್ರವಲ್ಲದೆ ಇತರರಿಗೂ ಸ್ಫೂರ್ತಿ ನೀಡುತ್ತದೆ. ಆಕೆ ಇನ್ನು ಮುಂದೆ ನನ್ನ ಸಹೋದರಿ ಮಾತ್ರವಲ್ಲ, ದೇಶದ ಸಹೋದರಿ ಎಂದು ಹೇಳಿದರು.
ಪ್ರಧಾನಿಯವರನ್ನು ಹತ್ತಿರದಿಂದ ನೋಡುವುದು ತುಂಬಾ ಹೆಮೆಯ ಕ್ಷಣವಾಗಿತ್ತು ಎಂದು ಹೇಳಿದರು. ಸೋಫಿಯಾಗೆ ಈ ಅವಕಾಶ ನೀಡಿದ್ದಕ್ಕಾಗಿ ನಮ ರಕ್ಷಣಾ ಪಡೆಗೆ ನಾನು ಧನ್ಯವಾದ ಹೇಳುತ್ತೇನೆ. ಮಹಿಳೆ ಮಾಡದ ತಪ್ಪಿಗೆ ಅನುಭವಿಸಿದ ಶಿಕ್ಷೆಗೆ ಸೇಡು ತೀರಿಸಿಕೊಳ್ಳುವುದಕ್ಕಿಂತ ಉತ್ತಮ ಕ್ಷಣ ಇನ್ನೊಂದಿಲ್ಲ. ನಮ ಮಹಿಳೆಯರು ಪುರುಷರಿಗಿಂತ ಯಾವ ರೀತಿಯಲ್ಲೂ ಕಡಿಮೆಯಿಲ್ಲ ಎಂಬುದನ್ನು ಶತ್ರುಗಳಿಗೂ ತೋರಿಸಿದ್ದಾರೆ ಎಂದರು.
ಸೋಫಿಯಾ ಖುರೇಷಿ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಕರ್ನಲ್ ಆಗಿದ್ದಾರೆ. ಪಾಕಿಸ್ತಾನ ಆಕ್ರಮಿತ ಕಾಶೀರ ಹಾಗೂ ಪಾಕಿಸ್ತಾನದಲ್ಲಿರುವ 9 ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ಸೇನೆ ಜಂಟಿ ದಾಳಿ ಮಾಡಿ ಉಗ್ರರ ನೆಲೆಗಳನ್ನು ನಾಶಪಡಿಸಿರುವ ಕುರಿತು ಸುದ್ದಿಗೋಷ್ಠಿಯಲ್ಲಿ ಇವರೇ ಮಾಹಿತಿ ನೀಡಿದ್ದರು. ಸೋಫಿಯಾ ಖುರೇಷಿ ಮೂಲತಃ ಗುಜರಾತ್‌ನವರು. ಅಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದ ನಂತರ ಮೊದಲ ಬಾರಿಗೆ ತಮ ತವರು ರಾಜ್ಯ ಗುಜರಾತ್‌ಗೆ ಭೇಟಿ ನೀಡಿರುವ ಮೋದಿ ಅವರು ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.