ಬೆಂಗಳೂರು,ಮೇ20- ಸಂಸದ ಪ್ರಜ್ವಲ್ ರೇವಣ್ಣ ಅವರು ಸ್ವದೇಶಕ್ಕೆ ವಾಪಸ್ ಬಂದು ಎಸ್‌ಐಟಿ ತನಿಖೆಗೆ ಸಹಕಾರ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಹಿರಂಗ ಕರೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪರವಾಗಿ ನಾನೇ ಈ ಬಹಿರಂಗ ಕರೆಯನ್ನು ಕೊಡುತ್ತಿದ್ದೇನೆ. ಮುಂದಿನ 24 ಗಂಟೆ ಇಲ್ಲವೇ 48 ಗಂಟೆಯೊಳಗೆ ವಾಪಸ್ಸಾಗಿ ತನಿಖೆಯನ್ನು ಎದುರಿಸಬೇಕು ಎಂದರು.
ಈ ನೆಲದ ಕಾನೂನಿಗೆ ಯಾರೂ ದೊಡ್ಡವರಲ್ಲ. ಕೇಳಿಬಂದಿರುವ ಆರೋಪದ ಸತ್ಯಾಸತ್ಯತೆ ತನಿಖೆಯಿಂದ ಹೊರಬೇಕು ಎಂದು ಹೇಳಿದರು. ಅಶ್ಲೀಲ ಪೆನ್‌ಡ್ರಯನ್ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಅದರ ಚಿತಾವಣೆಯ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದ್ದಾರೆ ಎಂಬುದು ಮಾಜಿ ಸಂಸದ ಶಿವರಾಮೇಗೌಡ ಹಾಗೂ ವಕೀಲ ದೇವರಾಜಗೌಡ ಅವರ ೇನ್ ಸಂಭಾಷಣೆಯಿಂದ ಬಹಿರಂಗವಾಗಿದೆ ಎಂದರು.
ನಮ ಸುತ್ತಮುತ್ತ ಇರುವ 45 ಜನರ ಫೋನ್ ಟ್ಯಾಪ್ ಮಾಡಲಾಗುತ್ತಿದೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ೇನ್ ಟ್ಯಾಪ್ ಮಾಡಲಾಗುತ್ತಿದೆ. ಹೊಸ ೇನ್ ಬಳಸಿದರೂ ಅದು ಕೂಡ ಟ್ಯಾಪ್ ಆಗುತ್ತಿದೆ ಎಂದು ಆರೋಪಿಸಿದರು.
ಪ್ರಜ್ವಲ್ ಮೇಲೆ ಆರೋಪ ಕೇಳಿಬಂದ ಕೂಡಲೇ ಬಹಳಷ್ಟು ನೊಂದಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದರು. ರಾಜ್ಯದ ಹಿತಕ್ಕಾಗಿ ನೀವು ರಾಜ್ಯಸಭೆಯಲ್ಲಿ ಇರಬೇಕು ಎಂದು ಅವರ ಮನವೊಲಿಸಿದ್ದೇನೆ ಎಂದು ಹೇಳಿದರು.
ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಆ ಅವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಹೇಳಿದರು. ಎಸ್‌ಐಟಿಯಿಂದ ಪಾರದರ್ಶಕ ತನಿಖೆ ನಡೆಯಬೇಕಾದರೆ ಶಿವರಾಮೇಗೌಡ ಹಾಗೂ ಶಿವಕುಮಾರ್ ಅವರ ಮೇಲೂ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದರು.