Saturday, April 27, 2024
Homeರಾಷ್ಟ್ರೀಯವಾಣಜ್ಯ ಬಳಕೆ ಎಲ್‍ಪಿಜಿ ದರ ಹೆಚ್ಚಳ

ವಾಣಜ್ಯ ಬಳಕೆ ಎಲ್‍ಪಿಜಿ ದರ ಹೆಚ್ಚಳ

ನವದೆಹಲಿ,ಮಾ.1- ಇಂದಿನಿಂದಲೇ ಜಾರಿಯಾಗುವಂತೆ ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್‍ಗಳ ಬೆಲೆಯನ್ನು 25 ರೂ.ಗಳಷ್ಟು ಹೆಚ್ಚಿಸಲಾಗಿದೆ. ಈ ಬೆಲೆ ಏರಿಕೆಯೊಂದಿಗೆ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್‍ನ ಚಿಲ್ಲರೆ ಬೆಲೆ 1,795 ರೂ. ಆಗಿದೆ. ಮುಂಬೈನಲ್ಲಿ ಇಂದಿನಿಂದ 19 ಕೆಜಿ ಸಿಲಿಂಡರ್ 1,749 ರೂ.ಗೆ ಮಾರಾಟವಾಗಲಿದೆ.

ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ, ವಾಣಿಜ್ಯ ಎಲ್‍ಪಿಜಿ ಗ್ಯಾಸ್ ಸಿಲಿಂಡರ್‍ಗಳ ಬೆಲೆ ಕ್ರಮವಾಗಿ 1,960 ರೂ, ಮತ್ತು 1,911 ರೂ.ಗೆ ಏರಿಕೆಯಾಗಿದೆ. ಫೆಬ್ರವರಿ 1 ರಂದು 19 ಕೆಜಿ ಗ್ಯಾಸ್ ಸಿಲಿಂಡರ್ ದರ 14 ರೂ. ಹೆಚ್ಚಾಗಿತ್ತು. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 23.50 ರೂ. ಹೆಚ್ಚಾಗಿ 1,875 ರೂ. ಆಗಿದೆ. ಕಳೆದ ಎರಡು ತಿಂಗಳ ದರ ಪರಿಷ್ಕರಣೆ ಬಗ್ಗೆ ಗಮನಿಸುವುದಾದರೆ, ಕೋಲ್ಕತಾದಲ್ಲಿ ಗರಿಷ್ಠ ಹೆಚ್ಚಳ ಕಂಡುಬಂದಿದೆ. ಕೋಲ್ಕತ್ತಾದಲ್ಲಿ ಎರಡು ತಿಂಗಳ ಅವಯಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 42 ರೂಪಾಯಿ ಏರಿಕೆಯಾಗಿದೆ. ಆ ನಂತರ ಮುಂಬೈನಲ್ಲಿ 40.5 ರೂ. ಏರಿಕೆಯಾಗಿದೆ.

ದೇಶದ ರಾಜಧಾನಿ ದೆಹಲಿಯಲ್ಲಿ ಈ ಏರಿಕೆ 39.5 ರೂ. ಆಗಿದೆ. ದಕ್ಷಿಣ ಭಾರತದ ಅತಿದೊಡ್ಡ ಮಹಾನಗರವಾದ ಚೆನ್ನೈಯಲ್ಲಿ ಎರಡು ತಿಂಗಳಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕನಿಷ್ಠ 36 ರೂ. ಏರಿಕೆಯಾಗಿದೆ. ಮುಂಬರುವ ದಿನಗಳಲ್ಲಿ ವಾಣಿಜ್ಯ ಅನಿಲ ಸಿಲಿಂಡರ್‍ಗಳ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಗೃಹಬಳಕೆಯ ಗ್ಯಾಸ್ ಸಿಲಿಂಡರ್‍ಗಳ ಬೆಲೆ ಪರಿಷ್ಕರಣೆಯನ್ನು ಕಳೆದ 6 ತಿಂಗಳುಗಳಿಂದ ಸ್ಥಗಿತಗೊಳಿಸಲಾಗಿದೆ.

ಆಗಸ್ಟ್ 30 ರಿಂದ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆ ಸಮಯದಲ್ಲಿ ಕೇಂದ್ರ ಸರ್ಕಾರವು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 200 ರೂ. ಇಳಿಕೆ ಮಾಡಿತ್ತು. ಆ ನಂತರ ದೆಹಲಿಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 903 ರೂ.ಗೆ ಮತ್ತು ಕೋಲ್ಕತ್ತಾದಲ್ಲಿ 929 ರೂ.ಗೆ ಇಳಿದಿತ್ತು.

ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹಿಂದಿನ ತಿಂಗಳ ಅಂತರರಾಷ್ಟ್ರೀಯ ಮಾರುಕಟ್ಟೆಯ ಸರಾಸರಿ ಬೆಲೆಯನ್ನು ಆಧರಿಸಿ ಪ್ರತಿ ತಿಂಗಳ ಮೊದಲನೆಯ ದಿನ ಎಲ್‍ಪಿಜಿ ಬೆಲೆಯನ್ನು ಪರಿಷ್ಕರಿಸುತ್ತವೆ. ಆದರೆ, ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‍ಗಳ ಬೆಲೆ ಪರಿಷ್ಕರಣೆ ಕಳೆದ ಆರು ತಿಂಗಳುಗಳಿಂದ ಸ್ಥಗಿತವಾಗಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು ಪ್ರತಿ ತಿಂಗಳ ಪರಿಷ್ಕರಣೆ ಮಾಡಲಾಗುತ್ತಿದೆ. ಕಳೆದ ತಿಂಗಳೂ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್ ಮಂಡನೆ ಮಾಡುವುದಕ್ಕೂ ಕೆಲವೇ ಗಂಟೆಗಳ ಮುನ್ನ ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್ ದರವನ್ನು 14 ರೂ.ಗೆ ಏರಿಕೆ ಮಾಡಲಾಗಿತ್ತು.

RELATED ARTICLES

Latest News