ಹಾವೇರಿ,ಮಾ.15- ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ವಿಧಾನಪರಿಷತ್ ಸದಸ್ಯ ಆರ್.ಶಂಕರ್ ಅವರ ರಾಣೇಬೆನ್ನೂರಿನ ಬೀರಲಿಂಗೇಶ್ವರ ನಗರದ ಮನೆ ಮೇಲೆ ಮಂಗಳವಾರ ತಡರಾತ್ರಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶಂಕರ್ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ ಲೋಟ ಹಾಗೂ ಎಲ್‍ಕೆಜಿಯಿಂದ ಪದವಿ ಕಾಲೇಜುಗಳವರೆಗೆ ಹಂಚಲು ತಂದಿರುವ ಸ್ಕೂಲ್‍ಬ್ಯಾಗ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ಹಾವೇರಿ ಉಪವಿಭಾಗಧಿಕಾರಿ ದಾಖಲೆ ಪತ್ರ, ಬಿಲ್ ಮತ್ತು ಸ್ಟಾಕ್ ಚೆಕ್‍ಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. 6000ಕ್ಕೂ ಹೆಚ್ಚು ಸೀರೆ, 9000 ಕ್ಕೂ ಹೆಚ್ಚು ಶಾಲಾ ಕಾಲೇಜು ಬ್ಯಾಗ್ ಗಳು ಸೇರಿದಂತೆ ತಟ್ಟೆಲೋಟಗಳನ್ನು ವಶಕ್ಕೆ ಪಡೆಯಲಾಗಿದೆ.
ಸತತ 3ನೇ ದಿನವೂ ನಡೆಯದ ಸಂಸತ್ ಕಲಾಪ, ಅಮೂಲ್ಯ ಸಮಯ ವ್ಯರ್ಥ
ಸುಮಾರು 30-40 ಲಕ್ಷ ಬೆಲೆಬಾಳುವ ಗೃಹಪಯೋಗಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಸೀಜ್ ಆಗಿರುವ ವಸ್ತುಗಳನ್ನು ಅಧಿಕಾರಿಗಳು ಪೊಲೀಸರವಶಕ್ಕೆ ನೀಡಿದ್ದಾರೆ. ಸುಮಾರು ಏಳು ಗಂಟೆಗಳ ಕಾಲ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ದಾಳಿಯ ವೇಳೆ ಗೃಹ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ವಸ್ತುಗಳು ಪತ್ತೆಯಾಗಿವೆ. ಶಂಕರ್ ಅವರ ಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ, ಶಾಲಾ ಹಾಗೂ ಪದವಿ ಕಾಲೇಜು ಮಕ್ಕಳಿಗೆ ಹಂಚಲು ತಂದಿದ್ದ ಸ್ಕೂಲ್ ಬ್ಯಾಗ್‍ಗಳು ಪತ್ತೆಯಾಗಿವೆ.
ಸುಮಾರು 8 ಕೋಟಿ ರೂ. ವೆಚ್ಚದ ವಸ್ತುಗಳು ಪತ್ತೆಯಾಗಿವೆ ಎಂದು ಅಂದಾಜಿಸಲಾಗಿದ್ದು, ಈ ಎಲ್ಲ ವಸ್ತುಗಳ ಖರೀದಿ ಬಿಲ್ ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಶಂಕರ್, ಬಿಲ್ ಕೊಡಲು ಅವಕಾಶ ಕೇಳಿದ್ದಾರೆ. ಒಂದು ವೇಳೆ ಸರಿಯಾದ ಜಿಎಸ್‍ಟಿ ಬಿಲ್ ಇಲ್ಲದಿದ್ದರೆ ದಂಡ ವಿಧಿಸುವ ಸಾಧ್ಯತೆ ಇದೆ.
ಹಾವೇರಿ ಉಪವಿಭಾಗಾಧಿಕಾರಿ ಅವರಿಗೆ ದಾಖಲೆ ಪತ್ರ, ಬಿಲ್‍ಮತ್ತು ಸ್ಟಾಕ್‍ಚೆಕ್‍ತಪಾಸಣೆ ನಡೆಸಲು ವಾಣಿಜ್ಯ ತೆರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಂತರ ಸರ್ಕಾರಕ್ಕೆ ವರದಿ ಸಲ್ಲಿಸಲು ತಿಳಿಸಿದ್ದಾರೆ ಎನ್ನಲಾಗಿದೆ.
ಇನ್ನು ಚುನಾವಣೆ ನಿಯಮ ಉಲ್ಲಂಘಣೆ ಮಾಡಿದ್ದಾರಾ ಎಂಬುವುದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಸಹ ದಾಳಿ ಮಾಡಿದ್ದು, ಎಲ್ಲ ದಾಖಲೆಗಳನ್ನು ಕೊರ್ಟ್ ಮುಂದೆ ಹಾಜರುಪಡಿಸಿ, ಒಪ್ಪಿಗೆ ಮೇರೆಗೆ ಎಫ್‍ಐಆರ್ ದಾಖಲು ಮಾಡಲಾಗುವುದು ಎಂದು ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ ಮಾಹಿತಿ ನೀಡಿದ್ದಾರೆ.
ನರೇಗಾ ಯೋಜನೆ ಸ್ಥಗಿತಗೊಳಿಸುವ ಹುನ್ನಾರ : ಕೇಂದ್ರದ ವಿರುದ್ಧ ವ್ಯಾಪಕ ಆಕ್ರೋಶ
ಇನ್ನು ಆರ್.ಶಂಕರ್ ನಿವಾಸದ ಮೇಲೆ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಆಗಮಿಸಿದ ಮಾಜಿ ಸಚಿವರ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಕರ್, ಯಾರದ್ದೋ ಕುಮ್ಮಕ್ಕಿನಿಂದ ಈ ದಾಳಿ ನಡೆದಿದೆ. ನಾನು ದುಡಿದ ಹಣವನ್ನು ಸಮಾಜ ಸೇವೆಗೆ ಬಳಕೆ ಮಾಡುತ್ತಿದ್ದೇನೆ ಎಂದಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಆರ್.ಶಂಕರ್ ವಿಜೇತರಾಗಿದ್ದರು. ಒಂದು ಬಾರಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದರು. ನಂತರ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಪತನವಾದ ಬಳಿಕ ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ಸೂಚಿಸಿದರು.
ನಾಳೆ ಕತ್ತಲಲ್ಲಿ ಮುಳುಗುವುದೇ ಕರ್ನಾಟಕ..?
ಪಕ್ಷ ವಿರೋಧಿ ಚಟುವಟಿಕೆ ಮೇಲೆ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಲಾಗಿದೆ. ನಂತರ ವಿಧಾನಸಭೆಯಿಂದ ವಿಧಾನಪರಿಷತ್‍ಗೆ ನೇಮಿಸಲಾಗಿತ್ತು. ಇದೀಗ ವಿಧಾನಸಭೆ ಚುನಾವಣೆಗೆ ಆರ್.ಶಂಕರ್ ಸಿದ್ದತೆ ನಡೆಸಿರುವಾಗಲೇ ವಾಣಿಜ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Commercial, tax, officials, raid, MLC, R Shankar, home, office,