Tuesday, May 28, 2024
Homeರಾಜ್ಯಏಪ್ರಿಲ್‌ನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದ 9,662.98 ಕೋಟಿ ತೆರಿಗೆ ಸಂಗ್ರಹ

ಏಪ್ರಿಲ್‌ನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಿಂದ 9,662.98 ಕೋಟಿ ತೆರಿಗೆ ಸಂಗ್ರಹ

ಬೆಂಗಳೂರು,ಮೇ14- ರಾಜ್ಯದ ವಾಣಿಜ್ಯ ತೆರಿಗೆಗಳ ಇಲಾಖೆಯು ಕಳೆದ ಏಪ್ರಿಲ್‌ ತಿಂಗಳಿನಲ್ಲಿ 9,662.98 ಕೋಟಿ ರೂ. ತೆರಿಗೆಯನ್ನು ಸಂಗ್ರಹಿಸಿದೆ. ಕಳೆದ ವರ್ಷ ಏಪ್ರಿಲ್‌ ತಿಂಗಳಿನಲ್ಲಿ 8,859.65 ಕೋಟಿ ರೂ. ತೆರಿಗೆ ಸಂಗ್ರಹ ಮಾಡಲಾಗಿತ್ತು. ಕಳೆದ ವರ್ಷದ ಏಪ್ರಿಲ್‌ಗೆ ಹೋಲಿಸಿದರೆ ಈ ವರ್ಷದ ಏಪ್ರಿಲ್‌ ತಿಂಗಳಿನಲ್ಲಿ ಒಂದು ಸಾವಿರ ಕೋಟಿ ರೂ.ಗೂ ಹೆಚ್ಚು ತೆರಿಗೆ ಸಂಗ್ರಹವಾಗಿದೆ.

ಕಳೆದ ಏಪ್ರಿಲ್‌ ತಿಂಗಳಿನಲ್ಲಿ 7678.06 ಕೋಟಿ ರೂ. ಸರಕು ಸೇವಾ ತೆರಿಗೆ, 1811.32 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 173.60 ಕೋಟಿ ರೂ. ವೃತ್ತಿ ತೆರಿಗೆ ಸಂಗ್ರಹಿಸಲಾಗಿದೆ.

2023-24ನೇ ಆರ್ಥಿಕ ಸಾಲಿನಲ್ಲಿ ಒಟ್ಟು 94,363.27 ಕೋಟಿ ರೂ. ತೆರಿಗೆ ಸಂಗ್ರಹವನ್ನು ರಾಜ್ಯದ ವಾಣಿಜ್ಯ ತೆರಿಗೆ ಇಲಾಖೆ ಮಾಡಿತ್ತು.

RELATED ARTICLES

Latest News