ವಾಣಿಜ್ಯ ಬಳಕೆ ವಾಹನಗಳ ಚಾಲಕರಿಗೆ ಮುಖ್ಯಮಂತ್ರಿ ವಿಮಾ ಯೋಜನೆ

Social Share

ಬೆಂಗಳೂರು,ಫೆ.17- ವಾಹನಗಳ ಚಲನವನಗಳ ಮೇಲೆ ನಿಗಾ ಇಡಲು ಮತ್ತು ಟೋಲ್‍ಗಳಲ್ಲಿ ಸುಲಭವಾಗಿ ಗ್ರಹಿಸಲು ಸಾಧ್ಯವಾಗುವಂತೆ ರಾಜ್ಯದಲ್ಲೂ ವೆಹಿಕಲ್ ಲೋಕೆಷನ್ ಟ್ರಾಕಿಂಗ್ ಸಿಸ್ಟಂ (ವಿಎಲ್‍ಟಿಎಸ್) ಅನ್ನು ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

2023-24ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ 22 ಕೋಟಿ ರೂಪಾಯಿ ವೆಚ್ಚ ಮಾಡಿಸ ವಿಎಸ್‍ಟಿಎಸ್‍ನ್ನು ಜಾರಿ ಮಾಡಲಾಗುತ್ತಿದೆ. ಜೊತೆಯಲ್ಲಿ ಕೇಂದ್ರ ಸರ್ಕಾರದ ಮತ್ತೊಂದು ಮಹತ್ವದ ಯೋಜನೆಯಾದ ನೋದಾಯಿತ ವಾಹನಗಳ ನಾಶಪಡಿಸುವಿಕೆ ನೀತಿ-2022ಯನ್ನು (ಸ್ಕ್ಯಾಪಿಂಗ್‍ಪಾಲಿಸಿ) ಜಾರಿಗೊಳಿಸಲಾಗಿದೆ ಎಂದಿದ್ದಾರೆ.

ರಾಜ್ಯ ಸಾರಿಗೆ ಇಲಾಖೆಯ ವಾಹನ ಹಾಗೂ ಸಾರಥಿ ಸೇವೆಗೆ ಸಂಬಂಧಿಸಿದ 31 ಸೇವೆಗಳನ್ನು ಸಂಪರ್ಕ ರಹಿತವಾಗಿ ಸಾರ್ವಜನಿಕರಿಗೆ ಆನ್‍ಲೈನ್ ಮೂಲಕ ಒದಗಿಸಲಾಗುತ್ತಿದೆ. ಮಂಗಳೂರು, ಕಲಬುರಗಿಯಲ್ಲಿ 30 ಕೋಟಿ ರೂಪಾಯಿ ವೆಚ್ಚ ಮಾಡಿ ಭಾರೀ ವಾಹನ ಚಾಲಕ ತರಬೇತಿ ಸಂಸ್ಥೆಗಳನ್ನು ಸ್ಥಾಪಿಸಲಾಗುವುದಾಗಿ ತಿಳಿಸಿದ್ದಾರೆ.

2025ರ ವೇಳೆಗೆ ಉಪನಗರ ರೈಲು ಯೋಜನೆಯ ಮೊದಲ ಹಂತ ಪೂರ್ಣ

ಶಿವಮೊಗ್ಗ, ಹಾಸನ, ಧಾರವಾಡ, ಮಂಗಳೂರು, ರಾಯಚೂರು, ಬೆಳಗಾವಿ ನಗರಗಳ್ಲ 38 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ನಿರ್ಮಿಲಾಗಿದೆ. ದೇವನಹಳ್ಳಿ, ಕೋಲಾರ, ಹೊಸಪೇಟೆ, ಗದಗ, ಬಳ್ಳಾರಿ, ವಿಜಯಪುರ, ಬೀದರ್, ಯಾದಗಿರಿ ಮತ್ತು ದಾವಣಗೆರೆಯಲ್ಲಿ 80 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ವಯಂ ಚಾಲಿತ ಪಥಗಳನ್ನು ನಿರ್ಮಿಸಲಾಗುತ್ತದೆ. ಮೈಸೂರು, ಧಾರವಾಡಗಳಲ್ಲಿ 31 ಕೋಟಿ ರೂಪಾಯಿ ವೆಚ್ಚದಲ್ಲಿ ವಾಹನ ತಪಾಸಣಾ ಮತ್ತು ಪ್ರಮಾಣೀಕರಣ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ವಾಣಿಜ್ಯ ವಾಹನಗಳ ಚಾಲಕರಿಗೆ ಮುಖ್ಯಮಂತ್ರಿ ವಿಮಾ ಯೋಜನೆಯನ್ನು ಹೊಸದಾಗಿ ಪ್ರಸ್ತಾಪಿಸಲಾಗಿದೆ. ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಮರಣದ ಸಂದರ್ಭದಲ್ಲಿ 2 ಲಕ್ಷ ರೂಪಾಯಿ, ಅಪಘಾತದಲ್ಲಿ ಮೃತಪಟ್ಟರೆ 2 ಲಕ್ಷ ಸೇರಿ ಒಟ್ಟು ನಾಲ್ಕು ಲಕ್ಷ ರೂಪಾಯಿಗಳ ವಿಮಾ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಲಾರಿ ಚಾಲಕರು ಹಾಗೂ ಇ-ಕಾಮರ್ಸ್‍ನಡಿ ಡೆಲಿವರಿ ಸೇವೆ ಒದಗಿಸುವ 16.50 ಲಕ್ಷ ಜನರ ಅವಲಂಬಿತರಿಗೆ ಈ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದ್ದಾರೆ.

ತುಮಕೂರು, ಹಾವೇರಿ, ಯಲಹಂಕ, ಕಸ್ತೂರಿನಗರ, ಸಕಲೇಶಪುರ, ಕೆಜಿಎಫ್, ಚಿಂತಾಮಣಿ, ಸಾಗರ, ಗೋಕಾಕ್, ರಾಣೆಬೆನ್ನೂರು, ಡಾಂಡೇಲಿ, ಶಿರಸಿ, ಬಾಲ್ಕಿ ನಗರಗಳ್ಲಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು 85 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

ಬಜೆಟ್‍ನಲ್ಲಿ ಯಾವ ಇಲಾಖೆಗೆ ಎಷ್ಟು ಅನುದಾನ..? ಇಲ್ಲದಿ ಕಂಪ್ಲೀಟ್ ಮಾಹಿತಿ

ಸಾರಿಗೆ ಇಲಾಖೆಯಲ್ಲಿ ಇ-ಚಲನ್ ವ್ಯವಸ್ಥೆಯಡಿ ಪ್ರವರ್ತನ ಚಟುವಟಿಕೆಗಳಲ್ಲಿ ಸಂಗ್ರಹವಾದ ರಾಜಿ ದಂಡವನ್ನು ಪಾವತಿಸಿಕೊಳ್ಳುವ ವ್ಯವಸ್ಥೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ರಾಜಾಜಿನಗರದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ. ಹಂತ ಹಂತವಾಗಿ ರಾಜ್ಯಾದ್ಯಂತ ಜಾರಿ ಮಾಡುವುದಾಗಿ ತಿಳಿಸಿದ್ದಾರೆ.

commercial, vehicle, drivers, insurance scheme,#BasavarajBommai,  #Budget2023, #StateBudget2023, #BommaiBudget, #ಬಜೆಟ್,  #ಬಜೆಟ್2023,

Articles You Might Like

Share This Article