ಗುಜರಾತ್‍ನ ವಡೋದರಾಲ್ಲಿ ಗಣೇಶ ಮೆರವಣಿಗೆ ವೇಳೆ ಘರ್ಷಣೆ, ಕಲ್ಲು ತೂರಾಟ

Social Share

ವಡೋದರಾ, ಅ 30 -ಗುಜರಾತ್‍ನ ವಡೋದರಾ ನಗರದಲ್ಲಿ ಗಣೇಶ ಮೂರ್ತಿಯನ್ನು ಹೊತ್ತ ಮೆರವಣಿಗೆಯಲ್ಲಿ ಸಾಗುತ್ತಿದ್ದಾಗ ಘರ್ಷಣೆ ಮತ್ತು ಕಲ್ಲು ತೂರಾಟ ಘಟನೆ ನಡೆದಿದೆ.

ತಡರಾತ್ರಿ ಎರಡು ಸಮುದಾಯ ಗುಂಪುಗಳ ನಡುವೆ ನಡೆದ ದ ಘರ್ಷಣೆಗೆ ಸಂಬಂಧಿಸಿದಂತೆ ಇದುವರೆಗೆ 13 ಜನರನ್ನು ಬಂಸಲಾಗಿದೆ, ಕಲ್ಲು ತೂರಾಟದಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಗಲಭೆ ಮತ್ತು ಕಾನೂನುಬಾಹಿರ ಸಭೆ ಆರೋಪದ ಮೇಲೆ ಎರಡೂ ಕಡೆಯ ಸದಸ್ಯರ ವಿರುದ್ಧ ವಡೋದರಾ ನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ರಾತ್ರಿ 11.15ರ ಸುಮಾರಿಗೆ ಸೂಕ್ಷ್ಮ ಮಾಂಡವಿ ಪ್ರದೇಶದ ಪಾಣಿಗೇಟ್ ದರ್ವಾಜಾ ಮೂಲಕ ಗಣೇಶ ಮೆರವಣಿಗೆ ಸಾಗುತ್ತಿದ್ದಾಗ ಕ್ಷುಲಕ ವಿಷಯಕ್ಕೆ ಸಂಬಂಸಿದಂತೆ ಇಬ್ಬರ ನಡುವೆ ವಾಗ್ವಾದ ನಡೆದು ಉಭಯ ಸಮುದಾಯಗಳ ಸದಸ್ಯರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ ಎಂದು ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಈಗ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಗಸ್ತು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಶಾಂತಿಯುತವಾಗಿದೆ ಮತ್ತು ಘಟನೆಯ ಬಗ್ಗೆ ಅಪರಾಧ ವಿಭಾಗದ ತನಿಖೆ ನಡೆಸುತ್ತಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಚಿರಾಗ್ ಕೊರಾಡಿಯಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ನಾವು ಜನರಿಗೆ ಮನವಿ ಮಾಡುತ್ತೇವೆ ಎಂದಿದ್ದಾರೆ.

Articles You Might Like

Share This Article