ಬೆಂಗಳೂರು,ಆ.23- ಸೂಕ್ಷ್ಮ ಪ್ರದೇಶವಾಗಿರುವ ಮಡಿಕೇರಿಯಲ್ಲಿ ಎಸ್‍ಡಿಪಿಐ ಕಾರ್ಯಕರ್ತರು ಶುಕ್ರವಾರ ಕೋಮುಗಲಭೆ ಸೃಷ್ಟಿಸುವ ಸಾಧ್ಯತೆ ಇರುವುದರಿಂದ ಇಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭ ನಡೆಸಲು ಅವಕಾಶ ಕೊಡಬಾರದು ಎಂದು
ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಮತ್ತು ಬಿಜೆಪಿ ಶುಕ್ರವಾರ ಮಡಿಕೇರಿಯಲ್ಲಿ ರಾಜಕೀಯ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿತ್ತು. ಜಿಲ್ಲಾಡಳಿತ ನಾಳೆ ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ವಿಸಿದೆ. ಇದರ ಬೆನ್ನಲ್ಲೇ ಗುಪ್ತಚರ ವಿಭಾಗವು ಸಿಎಂ ಬೊಮ್ಮಾಯಿ ಅವರಿಗೆ ವರದಿಯೊಂದನ್ನು ನೀಡಿದ್ದು, ಸಾರ್ವಜನಿಕರ ಹಿತರಕ್ಷಣೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜಕೀಯಸಮಾವೇಶ ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಬೇಕೆಂದು ಸಲಹೆ ಮಾಡಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಬೊಮ್ಮಾಯಿ ಅವರು, ಮಡಿಕೇರಿ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿದಂತೆ ಮತ್ತಿತರ ಕಡೆ ಯಾವುದೇ ರಾಜಕೀಯ ಪಕ್ಷಗಳ ಮುಖಂಡರಿಗೆ ಸಮಾರಂಭ, ಸಭೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವ ಮುನ್ನ ಸಂಬಂಧಪಟ್ಟವರಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಬೇಕೆಂದು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ಇನ್ನು ಇದೇ 26ರಂದು ಕಾಂಗ್ರೆಸ್‍ನ ಮಡಿಕೇರಿ ಚಲೋ ಹಾಗೂ ಬಿಜೆಪಿಯ ಸ್ವಾಭಿಮಾನ ಸಮಾವೇಶ ಸಂದರ್ಭದಲ್ಲಿ ಕೋಮುಗಲಭೆ ನಡೆಯುವ ಸಾಧ್ಯತೆ ಇರುವುರಿಂದ ಯಾರಿಗೂ ಸಭೆ ನಡೆಸಲು ಅವಕಾಶ ಕೊಡಬಾರದೆಂದು ಸಿಎಂ ಮಡಿಕೇರಿ ಜಿಲ್ಲಾಕಾರಿ ಹಾಗೂ ಪೆÇಲೀಸ್ ವರಿಷ್ಟಾಕಾರಿಗೆ ಸೂಚಿಸಿದ್ದಾರೆ.
ಈ ಹಿಂದೆ ಮಡಿಕೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ವಿರೋಸಿ ಪ್ರತಿಭಟನೆ ನಡೆಯುತ್ತಿದ್ದಾಗ ವಿಎಚ್‍ಪಿ ಕಾರ್ಯಕರ್ತ ಕುಟ್ಟಪ್ಪ ಎಂಬುವರ ಹಲ್ಲೆ ನಡೆಸಿದ್ದರಿಂದ ಸಾವನ್ನಪ್ಪಿದ್ದರು. ಪುನಃ ಇಂಥದೇ ಘಟನೆ ನಡೆಯುವ ಸಾಧ್ಯತೆ ಇರುವುದರಿಂದ ಸರ್ಕಾರ ಮುಂಜಾಗ್ರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸಿಎಂಗೆ ಸಲಹೆ ಮಾಡಲಾಗಿದೆ.
ಹೀಗಾಗಿ ಈಗಾಗಲೇ ಮಡಿಕೇರಿ ಜಿಲ್ಲಾಕಾರಿ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಳಗ್ಗೆಯಿಂದ 26ರವರೆಗೆ 144 ಸೆಕ್ಷನ್ ಹಾಕಿ ಸಭೆಸಮಾರಂಭ, ಮೆರವಣಿಗೆ, ರ್ಯಾಲಿ, ಜಾಥಾ,ಕಪ್ಪು ಬಾವುಟ ಹಿಡಿಯುವುದು, ಧ್ವನಿವರ್ಧಕ ಬಳಸಿ ಪ್ರಚೋದನಾತ್ಮಕ ಹೇಳಿಕೆ ನೀಡದಿರುವುದು, 5ಕ್ಕಿಂತ ಹೆಚ್ಚು ಜನ ಸೇರಬಾರದೆಂದು ಸೂಚನೆ ಕೊಟ್ಟಿದ್ದಾರೆ.
ಅಲ್ಲದೆ ಹೊರಭಾಗಗಳಿಂದ ಜಿಲ್ಲೆಗೆ ಬರುವವರ ಮೇಲೆ ತಪಾಸಣೆ ನಡೆಸಬೇಕು, ಯಾವುದಾದರೂ ರ್ನಿಷ್ಟ ಸಂಘಟನೆಗಳ ಚಲನವಲನಗಳ ಮೇಲೆ ಕಣ್ಣಿಡಬೇಕೆಂದು ಜಿಲ್ಲಾ ಪೆÇಲೀಸ್ ವರಿಷ್ಠಾಕಾರಿ ಸೂಚಿಸಿರುವುದಾಗಿ ತಿಳಿದುಬಂದಿದೆ.