Sunday, May 5, 2024
Homeರಾಜ್ಯರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ : ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ : ಸಿಎಂ ಸಿದ್ದರಾಮಯ್ಯ

ಬೆಳಗಾವಿ, ಅ.3- ಪ್ರತಿಪಕ್ಷ ಬಿಜೆಪಿಯವರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಗಳಾಗಿಲ್ಲ. ಶಿವಮೊಗ್ಗದಲ್ಲಿ ಕಲ್ಲು ತೂರಾಟವಾಗಿರುವ ಪ್ರಕರಣ ವರದಿಯಾಗಿದ್ದು, ತಕ್ಷಣವೇ ಕ್ರಮ ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಮ್ಮ ಸರ್ಕಾರದಲ್ಲಿ ಕೋಮುಗಲಭೆಗಳು ನಡೆಯಲು ಅವಕಾಶವಿಲ್ಲ. ಯಾವುದೇ ಗೊಂದಲವಾದರೂ ತಕ್ಷಣ ಹತ್ತಿಕ್ಕುತ್ತೇವೆ ಎಂದು ಹೇಳಿದರು. ಬಿಜೆಪಿಯವರಿಗೆ ಆರೋಪ ಮಾಡುವುದನ್ನು ಬಿಟ್ಟರೆ ಬೇರೆ ಕೆಲಸ ಇಲ್ಲ. ಆದರೆ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ರಾಜ್ಯದಲ್ಲಿ ಎಲ್ಲಿಯೂ ಕೋಮುಗಲಭೆಯಾಗಿಲ್ಲ. ಶಿವಮೊಗ್ಗ ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರನ್ನು ಬಂಧಿಸಿದ್ದಾರೆ ಎಂದು ತಿಳಿಸಿದರು.

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಕೋಲಾರ ಸೇರಿದಂತೆ ವಿವಿಧೆಡೆ ಬಿಜೆಪಿಯ ಪ್ರತಿಭಟನೆಗಳು ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆಗೆ ಅವಕಾಶಗಳಿವೆ. ಆದರೆ ಅದಕ್ಕೆ ಸಕಾರಣಗಳಿರಬೇಕು ಎಂದು ಹೇಳಿದರು. ತಮ್ಮ ಸರ್ಕಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಿಲ್ಲ, ಅನ್ಯಾಯ ಆಗಲು ಬಿಡುವುದೂ ಇಲ್ಲ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ. ಹಿರಿಯ ನಾಯಕರಾದ ಶ್ಯಾಮನೂರು ಶಿವಶಂಕರಪ್ಪನವರ ಜೊತೆ ತಾವು ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಬೇರೆ ಬೇರೆ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ. ಒಕ್ಕಲಿಗರ ಹೋರಾಟ ಸಮಿತಿಯವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದರು. ಅದನ್ನು ಆಧರಿಸಿ ಡಿ.ಕೆ.ಶಿವಕುಮಾರ್ ತಮಗೆ ಪತ್ರ ಬರೆದಿದ್ದಾರೆ. ಇಂದಷ್ಟೇ ತಾವು ಅದನ್ನು ನೋಡಿದ್ದಾಗಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕುರುಬ ಸಮುದಾಯದಿಂದ ನಾಯಕರಾದ ರೇವಣ್ಣ, ವಿಶ್ವನಾಥ್ ಸೇರಿದಂತೆ ಅನೇಕರು ಇಂದು ಬೆಳಗಾವಿಯಲ್ಲಿ ಸಮಾವೇಶ ಆಯೋಜಿಸಿದ್ದಾರೆ. ತಮ್ಮನ್ನೂ ಹಾಗೂ ಹರಿಯಾಣದ ರಾಜ್ಯಪಾಲರನ್ನೂ ಸಮಾವೇಶಕ್ಕೆ ಆಹ್ವಾನಿಸಿದ್ದಾರೆ. ಈ ಸಮಾವೇಶಕ್ಕೆ ಪ್ರತಿಯಾಗಿ ಶ್ಯಾಮನೂರು ಶಿವಶಂಕರಪ್ಪ ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗಿದೆ ಎಂಬ ಹೇಳಿಕೆ ನೀಡಿದ್ದಾರೆ ಎಂಬ ವಾದ ಸರಿಯಲ್ಲ ಎಂದರು. ಬೆಳಗಾವಿ ಜಿಲ್ಲೆ ವಿಭಜನೆಗೆ ಸಂಬಂಧಪಟ್ಟಂತೆ ಮುಂದಿನ ದಿನಗಳಲ್ಲಿ ಪರಿಶೀಲನೆ ನಡೆಸುವುದಾಗಿ ಅವರು ಸ್ಪಷ್ಟಪಡಿಸಿದರು.

ನಿಜ್ಜರ್ ಹತ್ಯೆ ತನಿಖೆಗೆ ಸಹಕರಿಸುವಂತೆ ಭಾರತಕ್ಕೆ ಅಮೆರಿಕ ಮನವಿ

RELATED ARTICLES

Latest News