Wednesday, September 11, 2024
Homeರಾಜ್ಯಛಲವಾದಿ ನಾರಾಯಣಸ್ವಾಮಿ ಸದಸ್ಯತ್ವ ಅನರ್ಹತೆಗೆ ರಾಜ್ಯಪಾಲರಿಗೆ ದೂರು

ಛಲವಾದಿ ನಾರಾಯಣಸ್ವಾಮಿ ಸದಸ್ಯತ್ವ ಅನರ್ಹತೆಗೆ ರಾಜ್ಯಪಾಲರಿಗೆ ದೂರು

ಬೆಂಗಳೂರು,ಸೆ.3- ಏಟಿಗೆ ಎದುರೇಟು ಎಂಬಂತೆ ಕಾಂಗ್ರೆಸ್‌‍ ನಾಯಕರು ವಿಧಾನಪರಿಷತ್‌ನ ವಿರೋಧಪಕ್ಷದ ನಾಯಕರೂ ಆಗಿರುವ ಛಲವಾದಿ ನಾರಾಯಣ ಸ್ವಾಮಿಯವರ ಭೂ ಅಕ್ರಮ ಪ್ರಕರಣವನ್ನು ಬಯಲಿಗೆ ತಂದಿದ್ದು, ವಿಧಾನಪರಿಷತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ವಿಧಾನಪರಿಷತ್‌ನ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್‌ ನೇತೃತ್ವದಲ್ಲಿ ಕಾಂಗ್ರೆಸ್‌‍ನ ಹಲವು ಸದಸ್ಯರು, ನಾಯಕರು ಇಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ 61 ಪುಟಗಳ ಸುದೀರ್ಘ ದೂರನ್ನು ದಾಖಲಿಸಿದ್ದು, ಅಗತ್ಯ ಪುರಾವೆಗಳನ್ನು ಒದಗಿಸಿದ್ದಾರೆ.

2002 ರ ನವೆಂಬರ್‌ 28 ರಿಂದ 2004 ರ ಮೇ 5 ರ ನಡುವೆ ಕರ್ನಾಟಕ ವಸತಿ ಮಂಡಳಿ ನಿರ್ದೇಕರಾಗಿದ್ದ ಛಲವಾದಿ ನಾರಾಯಣ ಸ್ವಾಮಿಯವರು ಭೂ ಕಬಳಿಕೆ ಮಾಡಿ ತಾವು ಅಧ್ಯಕ್ಷರಾಗಿರುವ ಆದರ್ಶ ಸೋಶಿಯಲ್‌ ಅಂಡ್‌ ಎಜುಕೇಷನ್‌ ಟ್ರಸ್ಟ್‌ಗೆ ಬಳಸಿಕೊಂಡಿದ್ದು, ಶಾಲೆ ನಿರ್ಮಿಸಿದ್ದಾರೆ ಎಂದು ದೂರಿದ್ದಾರೆ.

ಈ ಹಗರಣವನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸೆಕ್ಷನ್‌ 13, ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 316, 318ರ ಅಡಿ ತನಿಖೆ ನಡೆಸಲು ಅನುಮತಿ ನೀಡಬೇಕು ಹಾಗೂ ನಾರಾಯಣಸ್ವಾಮಿಯವರ ವಿಧಾನಪರಿಷತ್‌ನ ಸದಸ್ಯತ್ವವನ್ನು ರದ್ದುಪಡಿಸಬೇಕು ಎಂದು ಮನವಿ ಒತ್ತಾಯಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯರಾದ ಎಂ.ಆರ್‌.ಸೀತಾರಾಂ, ಮಂಜುನಾಥ್‌ ಭಂಡಾರಿ, ಎಸ್‌‍.ರವಿ ವಸಂತಕುಮಾರ್‌, ಅನಿಲ್‌ಕುಮಾರ್‌, ದಿನೇಶ್‌ಗೂಳಿಗೌಡ, ಪುಟ್ಟಣ್ಣ, ಕೆಪಿಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ರಮೇಶ್‌ ಬಾಬು, ಸೇರಿದಂತೆ ಹಲವರು ರಾಜ್ಯಪಾಲರನ್ನು ಭೇಟಿ ಮಾಡಿದ ನಿಯೋಗದಲ್ಲಿದ್ದರು.

RELATED ARTICLES

Latest News