ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು ದಾಖಲು

Social Share

ಬೆಂಗಳೂರು,ಅ.16- ಸಾರ್ವಜನಿಕವಾಗಿ ಹಾವಿನ ಪ್ರದರ್ಶನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಧಾರ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಅವರ ವಿರುದ್ಧ ದೂರು ದಾಖಲಾಗಿದೆ. ಇತ್ತೀಚೆಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಜಗ್ಗಿ ವಾಸುದೇವ್ ಅವರು ಜೀವಂತ ಹಾವನ್ನು ಹಿಡಿದು ಸಾರ್ವಜನಿಕವಾಗಿ ಪ್ರದರ್ಶನ ಮಾಡಿದ್ದರು. ಈ ಚಿತ್ರ ಜಾಲತಾಣದಲ್ಲಿ ವೈರಲ್ ಆಗಿತ್ತು.

ವನ್ಯಜೀವಿಗಳನ್ನು ಹಿಡಿದು ಸಾರ್ವಜನಿಕ ವೇದಿಕೆಗಳಲ್ಲಿ ಪ್ರದರ್ಶನ ಮಾಡುವುದು ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಸ್ಪಷ್ಟ ಉಲ್ಲಂಘನೆ ಆಗುತ್ತದೆ ಎಂದು ಆಕ್ಷೇಪಿಸಿ ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು ನೀಡಲಾಗಿದೆ.

ಹಾವಿನ ಅಕ್ರಮ ಸಾಗಣೆ ಮಾಡಿ ಸಾರ್ವಜನಿಕವಾಗಿ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ಸೊಸೈಟಿ ಫಾರ್ ಪ್ರಿವೆನ್ಷನ್ ಆಫ್ ಕ್ರೌಲ್ಟಿ ಟು ಅನಿಮಲ್ಸ್ (ಎಸ್‍ಪಿಸಿಎ) ಸದಸ್ಯರು ಚಿಕ್ಕಬಳ್ಳಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ವೇಳಾಪಟ್ಟಿ-2ರಡಿ ಹಾವು ಪಟ್ಟಿ ಮಾಡಲಾಗಿದ್ದು, ಇದರ ಡಿಎಫ್‍ಐಆರ್ ದಾಖಲಿಸಬೇಕು ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಕ್ಟೋಬರ್ 9 ಮತ್ತು 10ರಂದು ಸದ್ಗುರುಗಳು ಹಾವನ್ನು ಪ್ರದರ್ಶಿಸಿದ್ದು, ಈ ಉರಗವನ್ನು ಇನ್ನೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಸ್ತಾಂತರಿಸಿಲ್ಲ ಎಂದು ಸದಸ್ಯರು ದೂರಿನಲ್ಲಿ ಆರೋಪಿಸಿದ್ದಾರೆ.

ದೂರು ಸದ್ಗುರುಗಳ ವಿರುದ್ಧ ಅಲ್ಲ, ಆದರೆ ಅವರು ಅನೇಕ ಅನುಯಾಯಿಗಳನ್ನು ಹೊಂದಿರುವುದರಿಂದ ಅವರು ಜವಾಬ್ದಾರರಾಗಿರಬೇಕು ಮತ್ತು ಇತರರು ಅದೇ ರೀತಿ ಮಾಡಲು ಸೂರ್ತಿಯಾಗಿ ತೆಗೆದುಕೊಳ್ಳಬಾರದು ಎಂದಿದ್ದಾರೆ.

Articles You Might Like

Share This Article