ಲೋಕಾಯುಕ್ತದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ದೂರಿನ ಸುರಿಮಳೆ

Social Share

ಬೆಂಗಳೂರು,ಫೆ.2- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಬಟ್ ವಾದ್ರಾ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಹಾಗೂ ಹಲವಾರು ಅಧಿಕಾರಿಗಳ ವಿರುದ್ಧ ವಿರುದ್ಧ ಲೋಕಾಯುಕ್ತಕ್ಕೆ 3728 ಪುಟಗಳ ದಾಖಲೆ ಸಮೇತ ದೂರುಗಳ ಸರಮಾಲೆಯನ್ನೇ ಸಲ್ಲಿಸಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಅವರು, ಕಾಂಗ್ರೆಸ್ ಮುಖಂಡರ 10 ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಬರ್ಟ್ ವಾದ್ರಾ, ಮಾಜಿ ಸಚಿವರಾದ ಕೆ. ಜೆ. ಜಾರ್ಜ್, ಕೃಷ್ಣ ಭೈರೇಗೌಡ, ಯು. ಟಿ. ಖಾದರ್ , ಎಂ. ಬಿ. ಪಾಟೀಲ್, ಜಮೀರ್ ಅಹಮದ್, ದಿನೇಶ್ ಗುಂಡೂರಾವ್. ಎಂ. ಕೃಷ್ಣಪ್ಪ, ಎನ್, ಎ. ಹ್ಯಾರೀಸ್ ಹಾಗೂ ಪ್ರಿಯಾ ಕೃಷ್ಣ ಅವರುಗಳ ವಿರುದ್ಧ 10 ದೂರುಗಳನ್ನು ದಾಖಲಿಸಿದ್ದಾರೆ.

ಅದೇ ರೀತಿ 9 ಹಿರಿಯ ಐಎಎಸ್ ಅಧಿಕಾರಿಗಳು, ಐದು ಕೆಎಎಸ್ ಅಧಿಕಾರಿಗಳು ಸೇರಿದಂತೆ 21 ಮಂದಿ ಅಧಿಕಾರಿಗಳ ವಿರುದ್ಧವೂ ಅವರು ದೂರು ದಾಖಲಿಸಿದ್ದಾರೆ.

ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಪ್ರಪ್ರಥಮವಾಗಿ 10 ವಿವಿಧ ಬೃಹತ್ ಹಗರಣಗಳಿಗೆ ಸಂಬಂಧಿಸಿದಂತೆ, ಪ್ರತ್ಯೇಕವಾದ 10 ದೂರುಗಳನ್ನು ಒಂದೇ ಬಾರಿಗೆ ಲೋಕಾಯುಕ್ತದಲ್ಲಿ ದಾಖಲಿಸಲಾಗಿದೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 189 ಇಂದಿರಾ ಕ್ಯಾಂಟೀನ್ ಗಳ ಗ್ರಾಹಕರ ಹೆಸರಿನಲ್ಲಿ ಪ್ರತೀ ತಿಂಗಳು 11,52,74,273/- ರೂಪಾಯಿಗಳಂತೆ 560 ಕೋಟಿ ರೂಪಾಯಿ ಹಣ ಕಬಳಿಸಿರುವ ಹಗರಣ, ಬಿಬಿಎಂಪಿ ವ್ಯಾಪ್ತಿಯ 439 ಬಸ್ ತಂಗುದಾಣಗಳಲ್ಲಿ ಕಾನೂನು ಬಾಹಿರವಾಗಿ ಮತ್ತು ಪಾಲಿಕೆಗೆ ನಿಯಮಾನುಸಾರ ಪಾವತಿಸಬೇಕಾಗಿದ್ದ 68.15 ಕೋಟಿ ರೂಪಾಯಿಗಳಷ್ಟು ಜಾಹೀರಾತು ಶುಲ್ಕವನ್ನು ಪಾವತಿಸದೇ ತಮ್ಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆ ಬಳಸಿಕೊಂಡಿದ್ದ 68.15 ಕೋಟಿ ಜಾಹಿರಾತು ಶುಲ್ಕ ವಂಚನೆ ಹಗರಣ.ದೇಶದ ಬೆನ್ನೆಲುಬು ಎಂದೇ ಕರೆಯಲಾಗುವ ರೈತರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಮಳೆ ಆಧಾರಿತ ಕೃಷಿ ಭೂಮಿಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿ ರೈತರಿಗೆ ಸಹಾಯ ಮಾಡುವ ಕೃಷಿ ಭಾಗ್ಯ ಯೋಜನೆಯ ಹೆಸರಿನಲ್ಲಿ ನಡೆದಿರುವ 800 ಕೋಟಿ ರೂಪಾಯಿಗಳ ಹಗರಣ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್‍ಇಡಿ ಬೀದಿ ದೀಪಗಳ ಅಳವಡಿಕೆ ಯೋಜನೆಯ ಹೆಸರಿನಲ್ಲಿ ನಡೆದಿರುವ 1,600 ಕೋಟಿ ರೂಪಾಯಿಗಳ ಹಗರಣ, ಏಡ್ಸ್ ನಿಯಂತ್ರಣ ಸೊಸೈಟಿ ಮೂಲಕ ನಡೆಸಿರುವ ನೂರಾರು ಕೋಟಿ ಮೊತ್ತದ ಹಣ ದುರ್ಬಳಕೆ ಹಗರಣ, ಬಡ ರೋಗಿಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಹೆಸರಿನಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ನಡೆದಿರುವ ನೂರಾರು ಕೋಟಿ ರೂಪಾಯಿಗಳ ಹಗರಣ,

ಸಂಸತ್ ಉಭಯ ಸದನಗಳಲ್ಲಿ ಅದಾನಿ ಕೋಲಾಹಲ

ಬಿಬಿಎಂಪಿ ವ್ಯಾಪ್ತಿಯ ತ್ಯಾಜ್ಯ ವಿಲೇವಾರಿ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಆಯ್ದ 200 ಪ್ರಮುಖ ಸ್ಥಳಗಳಲ್ಲಿ ತಲಾ 02 ರಂತೆ ಅಂಡರ್‍ಗ್ರೌಂಡ್ ಡಸ್ಟ್‍ಬಿನ್ ಅಳವಡಿಸುವ ಯೋಜನೆಯ ಹೆಸರಿನಲ್ಲಿ ನಡೆದಿರುವ 40 ಕೋಟಿ ರೂಪಾಯಿಗಳಷ್ಟು ಲೂಟಿ ಮಾಡಿರುವ ಹಗರಣ, ಪ್ರಧಾನ ಮಂತ್ರಿ ನರೇಂದ್ರ ಮೋದಿರವರ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸ್ವಚ್ಛ ಭಾರತ ಅಭಿಯಾನದ ಅನುಷ್ಠಾನದ ಹೆಸರಿನಲ್ಲಿ ಕಾನೂನುಬಾಹಿರವಾಗಿ ಅನುದಾನದ ದುರ್ಬಳಕೆ ಮಾಡಿಕೊಂಡಿರುವ ನೂರಾರು ಕೋಟಿ ರೂಪಾಯಿಗಳ ಹಗರಣ,

ವಿಶ್ವೇಶ್ವರಯ್ಯ ಜಲ ನಿಗಮದ ಕಾಮಗಾರಿಯೊಂದರ ಹೆಸರಿನಲ್ಲಿ ನಕಲಿ ವರ್ಕ್‍ಡನ್ ಸರ್ಟಿಫಿಕೆಟ್ ಪಡೆದು ನಿಗದಿತ ಗುತ್ತಿಗೆದಾರರಿಗೆ ಕಾನೂನು ಬಾಹಿರವಾಗಿ ಗುತ್ತಿಗೆ ನೀಡಿರುವ 158 ಕೋಟಿ ಮೊತ್ತದ ಹಗರಣಹಾಗೂ ರಾಬರ್ಟ್ ವಾದ್ರಾ ಪಾಲುದಾರಿಕೆಯ ಡಿಎಲ್‍ಎಫ್ ಸಂಸ್ಥೆಯು ಬೆಂಗಳೂರು ದಕ್ಷಿಣ ತಾಲ್ಲೂಕು ತಾವರೆಕೆರೆ ಹೋಬಳಿ ಗಂಗೇನಹಳ್ಳಿ ಗ್ರಾಮದ ಸರ್ವೆ ನಂಬರ್ 01 ರಿಂದ 99,

ವರ್ತೂರು ಗ್ರಾಮದ ಸರ್ವೆ ನಂಬರ್ 07, 08, 09, 10, ವರ್ತೂರು ನರಸೀಪುರ ಗ್ರಾಮದ ಸರ್ವೆ ನಂಬರ್ 01 ರಿಂದ 35 ಮತ್ತು ಪೆದ್ದನಪಾಳ್ಯ ಗ್ರಾಮದ ಸರ್ವೆ ನಂಬರ್ 17, 18, 19, 20 ರಲ್ಲಿರುವ ಸುಮಾರು . 9,600 ಕೋಟಿ ರೂಪಾಯಿಗಳಿಗೂ ಹೆಚ್ಚು ಬೆಲೆಬಾಳುವ 1,100 ಎಕರೆ ಸರ್ಕಾರೀ ಸ್ವತ್ತುಗಳನ್ನು ಕಬಳಿಸಿರುವ ಬೆಂಗಳೂರಿನ ಬೃಹತ್ ಭೂ ಕಬಳಿಕೆ ಹಗರಣಗಳ ಬಗ್ಗೆ ಸಾಕ್ಷಿ ಸಮೇತ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದು ರಮೇಶ್ ತಿಳಿಸಿದರು.

ಮೇಲೆ ತಿಳಿಸಿರುವ ಈ ಎಲ್ಲಾ ಹಗರಣಗಳಿಗೆ ಸಂಬಂಧಿಸಿದಂತೆ 3,728 ಪುಟಗಳ ಸಂಪೂರ್ಣ ದಾಖಲೆಗಳ ಸಹಿತವಾಗಿ ಲೋಕಾಯುಕ್ತದಲ್ಲಿ 10 ದೂರುಗಳನ್ನು ಮೇಲೆ ತಿಳಿಸಿರುವ ಎಲ್ಲ ಭ್ರಷ್ಟ ರಾಜಕಾರಣಿಗಳು ಮತ್ತು ವಂಚಕ ಅಧಿಕಾರಿಗಳ ವಿರುದ್ಧ ದಾಖಲಿಸಲಾಗಿದೆ.

ಮದುವೆ ವೇಳೆ ಗಲಾಟೆ, ವ್ಯಕ್ತಿಗೆ ಗುಂಡಿಕ್ಕಿ ಹತ್ಯೆ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ 07 ಪ್ರಕರಣಗಳು, ಮಾಜಿ ಸಚಿವ ಕೆ. ಜೆ. ಜಾರ್ಜ್ ವಿರುದ್ಧ 04 ದೂರುಗಳು, ಮಾಜಿ ಸಚಿವ ಯು. ಟಿ. ಖಾದರ್ , ಜಮೀರ್ ಅಹಮದ್ ಹಾಗೂ ಕೃಷ್ಣ ಭೈರೇಗೌಡ ವಿರುದ್ಧ ತಲಾ 02 ದೂರುಗಳು ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲï, ದಿನೇಶ್ ಗುಂಡೂರಾವï, ಎಂ. ಕೃಷ್ಣಪ್ಪ, ಶಾಸಕರಾದ ಎನ್. ಎ. ಹ್ಯಾರೀಸ್ ಹಾಗೂ ಮಾಜಿ ಶಾಸಕ ಪ್ರಿಯಾ ಕೃಷ್ಣ ರವರುಗಳ ವಿರುದ್ಧ ತಲಾ 01 ದೂರುಗಳನ್ನು ದಾಖಲಿಸಲಾಗಿದೆ ಎಂದು ಅವರು ವಿವರಣೆ ನೀಡಿದರು.

Complaints, Lokayukta, Congress, leader, NR Ramesh,

Articles You Might Like

Share This Article