Friday, November 22, 2024
Homeಇದೀಗ ಬಂದ ಸುದ್ದಿವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ವಿಧಾನ ಪರಿಷತ್‍ನ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಕಾಂಗ್ರೆಸ್

ಬೆಂಗಳೂರು, ಅ.29- ವಿಧಾನ ಪರಿಷತ್‍ನ ಐದು ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಧಿಕೃತ ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಂಗಳೂರು ಪದವಿಧರರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್, ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ. ಪಾಟೀಲ್ ಅವರಿಗೆ ಟಿಕೇಟ್ ನೀಡಲಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ರ್ಪಧಿಸುವ ಸಲುವಾಗಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‍ನ ಬಿಜೆಪಿಯಿಂದ ಸದಸ್ಯರಾಗಿದ್ದ ಪುಟ್ಟಣ್ಣ ರಾಜೀನಾಮೆ ನೀಡಿದರು.

ವಿಧಾನ ಚುನಾವಣೆಯಲ್ಲಿ ಅದೃಷ್ಟ ಕೈಹಿಡಿಯಲಿಲ್ಲ. ಈಗ ಮರಳಿ ಅದೇ ವಿಧಾನ ಪರಿಷತ್ ಕ್ಷೇತ್ರದಲ್ಲಿ ಸ್ರ್ಪಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ. ರಾಮೋಜಿ ಗೌಡ ಬೆಂಗಳೂರು ಪದವಿಧರರ ಕ್ಷೇತ್ರದಲ್ಲಿ ಈ ಮೊದಲು ಸ್ರ್ಪಧಿಸಿ ಹಿನ್ನೆಡೆ ಅನುಭವಿಸಿದ್ದರು. ಈಗ ಮತ್ತೆ ಅದೇ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ಅವಕಾಶ ಪಡೆದಿದ್ದಾರೆ.

BREAKING : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ವ್ಯಾಪ್ತಿಯನ್ನೊಳಗೊಂಡ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಸ್ರ್ಪಧಿಸಲು ಕೆ.ಕೆ. ಮಂಜುನಾಥ್ ಅವರಿಗೆ ಅವಕಾಶ ನೀಡಿದೆ. ಕೋಲಾರ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆಯ ಕೆಲವು ಭಾಗಗಳ ವ್ಯಾಪ್ತಿಯನ್ನು ಒಳಗೊಂಡ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ರ್ಪಧಿಸಿದ ಡಿ.ಟಿ. ಶ್ರೀನಿವಾಸ್ ಅವರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ.

ಹಿರಿಯೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ತಮ್ಮ ಪತಿ ಶ್ರೀನಿವಾಸ್ ಅವರೊಂದಿಗೆ ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು. ತಿಂಗಳ ಒಳಗಾಗಿಯೇ ಕಾಂಗ್ರೆಸ್ ಶ್ರೀನಿವಾಸ್ ಅವರಿಗೆ ಟಿಕೆಟ್ ಘೋಷಣೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.

ಬೀದರ್, ಕಲಬುರಗಿ, ಯಾದಗಿರ್, ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲಾ ವ್ಯಾಪ್ತಿಗಳನ್ನೊಳಗೊಂಡ ಈಶಾನ್ಯ ಪದವಿಧರರ ಕ್ಷೇತ್ರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ಚಂದ್ರಶೇಖರ್ ಪಾಟೀಲ್ ಅವರಿಗೆ ಟಿಕೆಟ್ ನೀಡಲಾಗಿದೆ.

RELATED ARTICLES

Latest News