Thursday, May 2, 2024
Homeರಾಜಕೀಯ"ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ" : ಕಾಂಗ್ರೆಸ್ ಆಕ್ರೋಶ

“ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ” : ಕಾಂಗ್ರೆಸ್ ಆಕ್ರೋಶ

ಬೆಂಗಳೂರು,ಏ.15- ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ ಎಮರ್ಜೆನ್ಸಿ ಎಕ್ಸಿಟ್ ಡೋರ್ ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆ ಎಂದು ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್‍ನ ಸಭೆಯಲ್ಲಿ ನಡೆದ ಗಲಾಟೆಯನ್ನು ಉಲ್ಲೇಖಿಸಿ ಲೇವಡಿ ಮಾಡಿದೆ.

ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‍ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ಸೂರ್ಯ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಕರ್ನಾಟಕ ಅಭ್ಯರ್ಥಿಗಳು ಗೋಬ್ಯಾಕ್ ಚಳುವಳಿ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ಧೂಳಿಪಟವಾಗುವುದು ನಿಶ್ಚಿತ ಎಂದು ಎಚ್ಚರಿಸಿದೆ.

RELATED ARTICLES

Latest News