ನವದೆಹಲಿ,ಸೆ.19- ಕಳೆದ ಜೂನ್‍ನಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಏಜೆಂಟ್‍ಗಳ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ಪಕ್ಷ ಬೆಂಬಲ ವ್ಯಕ್ತಪಡಿಸಿದೆ. ದೇಶದ ಹಿತಾಸಕ್ತಿ ಮತ್ತು ಕಾಳಜಿಯನ್ನು ಎಲ್ಲ ಸಮಯದಲ್ಲೂ ಮುಖ್ಯವಾಗಿಟ್ಟುಕೊಳ್ಳಬೇಕು ಎಂದು ಕಾಂಗ್ರೆಸ್‍ನ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಹೇಳಿದ್ದಾರೆ.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಯಾವಾಗಲೂ ಭಯೋತ್ಪಾದನೆಯ ವಿರುದ್ಧದ ನಮ್ಮ ದೇಶದ ಹೋರಾಟವು ರಾಜಿಯಾಗದಂತಿರಬೇಕು ಎಂದು ನಂಬುತ್ತದೆ, ವಿಶೇಷವಾಗಿ ಭಯೋತ್ಪಾದನೆಯು ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತಂದಾಗ. ನಮ್ಮ ದೇಶದ ಹಿತಾಸಕ್ತಿ ಮತ್ತು ಕಾಳಜಿಗಳನ್ನು ಎಲ್ಲಾ ಸಮಯದಲ್ಲೂ ಅತ್ಯುನ್ನತವಾಗಿ ಇಡಬೇಕು ಎಂದು ಅವರು ಆನ್‍ಲೈನ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.
BIG NEWS; 5 ದಿನದಲ್ಲಿ ಭಾರತ ತೊರೆಯುವಂತೆ ಕೆನಡ ರಾಜತಾಂತ್ರಿಕರಿಗೆ ಸೂಚನೆ
ವಿರೋಧ ಪಕ್ಷಗಳು, ದೇಶೀಯ ವಿಷಯಗಳ ಬಗ್ಗೆ ಸರ್ಕಾರದೊಂದಿಗಿನ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ಸಾಮಾನ್ಯವಾಗಿ ಅಂತರರಾಷ್ಟ್ರೀಯ ವಿಷಯಗಳಲ್ಲಿ ದೇಶದ ಹಿತಾಸಕ್ತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಭಾರತಕ್ಕೆ ಬೇಕಾಗಿರುವ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಅವರನ್ನು ಸರ್ರೆಯ ಗುರುದ್ವಾರದ ಬಳಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿದ್ದರು. ಈ ಹತ್ಯಗೆ ಭಾರತದ ಏಜೆಂಟರುಗಳೇ ಕಾರಣ ಎಂದು ಕೆನಡಾ ಪ್ರಧಾನಿ ಟ್ರೂಡೋ ಆರೋಪಿಸಿದ್ದರು. ಭಾರತ ಈ ಆರೋಪಗಳನ್ನು ತಿರಸ್ಕರಿಸಿತು ಮತ್ತು ಕೆನಡಾ ಖಲಿಸ್ತಾನಿ ಭಯೋತ್ಪಾದಕರಿಗೆ ಆಶ್ರಯ ನೀಡಿದೆ ಎಂದು ಆರೋಪಿಸಿತ್ತು.
ನಟ ವಿಜಯ್ ಆಂಟೋನಿ ಪುತ್ರಿ ಆತ್ಮಹತ್ಯೆ
ಕೊಲೆಗಳು, ಮಾನವ ಕಳ್ಳಸಾಗಣೆ ಮತ್ತು ಸಂಘಟಿತ ಅಪರಾಧ ಸೇರಿದಂತೆ ಹಲವಾರು ಕಾನೂನುಬಾಹಿರ ಚಟುವಟಿಕೆಗಳಿಗೆ ಕೆನಡಾದಲ್ಲಿ ಜಾಗವನ್ನು ನೀಡಲಾಗಿದೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆ ತಿಳಿಸಿದೆ.
Congress, #Govtstand, #Canada, #allegations, #against, #India,