ಜೆಡಿಎಸ್ ನತ್ತ ಕಾಂಗ್ರೆಸ್-ಬಿಜೆಪಿ ಟಿಕೆಟ್ ವಂಚಿತರು

Social Share

ಬೆಂಗಳೂರು,ನ.3- ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್„ಸಲು ಅವಕಾಶ ಸಿಗುವುದಿಲ್ಲ ಎಂದು ಖಾತ್ರಿಯಾಗಿರುವ ಮುಖಂಡರು ಜೆಡಿಎಸ್ನತ್ತ ಮುಖ ಮಾಡತೊಡಗಿದ್ದಾರೆ.

ರಾಷ್ಟ್ರೀಯ ಪಕ್ಷಗಳಿಂದ ವಲಸೆ ಬರುವ ನಾಯಕರೊಂದಿಗೆ ಜೆಡಿಎಸ್ ನಾಯಕರು ನಿಕಟ ಸಂಪರ್ಕದಲ್ಲಿದ್ದಾರೆ. ಬೆಳಗಾವಿ, ಬಳ್ಳಾರಿ, ಧಾರವಾಡ ಹಾಗೂ ಬೆಂಗಳೂರು ಜಿಲ್ಲೆಯಲ್ಲಿ ಜೆಡಿಎಸ್ನತ್ತ ಮುಖ ಮಾಡುತ್ತಿರುವ ರಾಜಕೀಯ ಪಕ್ಷಗಳ ನಾಯಕರು ಹೆಚ್ಚಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಈಗಾಗಲೇ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಇದು ಘನಘೋರ : ಸಕಾಲದಲ್ಲಿ ಚಿಕಿತ್ಸೆ ಸಿಗದೇ ತಾಯಿ ಮತ್ತು ಅವಳಿ ನವಜಾತ ಶಿಶುಗಳ ಸಾವು

ಜೆಡಿಎಸ್ನ ಜನತಾ ಜಲಧಾರೆ, ಜನತಾಮಿತ್ರ ಹಾಗೂ ಪಂಚರತ್ನ ರಥಯಾತ್ರೆಗಳಿಂದ ಮತ್ತೆ ಕೆಲವರು ಪ್ರಭಾವಿತರಾಗಿದ್ದಾರೆ. ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ರಾಷ್ಟ್ರೀಯ ಪಕ್ಷಗಳ ಮುಖಂಡರು ಸೇರ್ಪಡೆಯಾಗಬಹುದು ಎಂದು ಜೆಡಿಎಸ್ ಮೂಲಗಳು ಹೇಳಿವೆ.

ಆದರೆ, ಯಾವ ಜಿಲ್ಲೆಯಲ್ಲಿ ಯಾವ ಪಕ್ಷದ ಮುಖಂಡರು ಜೆಡಿಎಸ್ಗೆ ಬರಲಿದ್ದಾರೆ ಎಂಬ ಮಾಹಿತಿಯನ್ನು ಬಹಿರಂಗಗೊಳಿಸದೇ ಗೌಪ್ಯವಾಗಿ ಇಟ್ಟಿದ್ದಾರೆ.ಹೀಗಾಗಿ 2023ರ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಪಟ್ಟಿ ನಿಗದಿ ಪಡಿಸಿದ್ದಕ್ಕಿಂತ ಹೆಚ್ಚಾಗುತ್ತಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮೈಸೂರಿನಲ್ಲಿ 126 ಅಭ್ಯರ್ಥಿಗಳೊಂದಿಗೆ ಕಾರ್ಯಾಗಾರ ನಡೆಸಿ 100ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗಿತ್ತು. ಮೊದಲ ಪಟ್ಟಿಯನ್ನು ಪಂಚರತ್ನ ಯಾತ್ರೆ ಆರಂಭದ ದಿನವೇ ಬಿಡುಗಡೆ ಮಾಡಲು ತೀರ್ಮಾನಿಸಲಾಗಿತ್ತು.

ಮಳೆಯ ಹಿನ್ನೆಲೆಯಲ್ಲಿ ಪಂಚರತ್ನ ಯಾತ್ರೆ ಮುಂದೂಡಲಾಗಿದೆ. ಈ ಯಾತ್ರೆ ಮರು ಆರಂಭದ ದಿನ ಪಟ್ಟಿ ಬಿಡುಗಡೆ ಮಾಡಲಿದ್ದು, ಪಕ್ಷಾಂತರ ಮಾಡುವುದಿಲ್ಲ ಎಂಬ ಪ್ರಮಾಣ ವಚನವನ್ನು ಸಂಭವನೀಯ ಅಭ್ಯರ್ಥಿಗಳು ಸ್ವೀಕರಿಸಲಿದ್ದಾರೆ.

ಸ್ವಂತ ಶಕ್ತಿಯ ಮೇಲೆ ರಾಜ್ಯದ ಅ„ಕಾರ ಹಿಡಿಯಬೇಕೆಂಬ ಮಹದಾಸೆ ಹೊಂದಿರುವ ಜೆಡಿಎಸ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 123 ಕ್ಷೇತ್ರಗಳಲ್ಲಿ ಗೆಲ್ಲಬೇಕು ಎಂಬ ಗುರಿ ಹೊಂದಿದೆ.ಈ ಗುರಿ ತಲುಪಲು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಿದ್ದು, ಈಗಿನಿಂದಲೇ ಚುನಾವಣೆ ಸಿದ್ಧತೆ ಪ್ರಚಾರವನ್ನು ಪ್ರಾರಂಭಿಸಿದೆ. ಅ„ಕಾರಕ್ಕೆ ಬಂದರೆ ಪಂಚರತ್ನ ಯೋಜನೆ ಜಾರಿಗೊಳಿಸುವ ಭರವಸೆಯೊಂದಿಗೆ ಜನರ ವಿಶ್ವಾಸಗಳಿಸಲು ಜೆಡಿಎಸ್ ನಿರಂತರ ಪ್ರಯತ್ನ ಮಾಡುತ್ತಿದೆ.

Articles You Might Like

Share This Article