ಪಣಜಿ, ಸೆ.14 – ಗೋವಾದ 8 ಕಾಂಗ್ರೆಸ್ ಶಾಸಕರು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ತನವಡೆ ಸ್ಪೋಟಕ ಮಾಹಿತಿ ನೀಡಿದ್ದಾರೆ.
ಎರಡು ತಿಂಗಳಿನಿಂದ ನಡೆಯುತ್ತಿದ್ದ ಪಕ್ಷಾಂತರದ ಪ್ರಯತ್ನ ಇಂದು ಕೊನೆಯಾಗಲಿದ್ದು ,ಕಾಂಗ್ರೇಸ್‍ನ 11 ಶಾಸಕರಲ್ಲಿ ಎಂಟು ಮಂದಿ ಹಿರಿಯ ನಾಯಕರಾದ ದಿಗಂಬರ್ ಕಾಮತ್ ಮತ್ತು ಮೈಕೆಲ್ ಲೋಬೋ ನೇತೃತ್ವದಲ್ಲಿ ಇಂದು ನಂತರ ಆಡಳಿತಾರೂಢ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಮೈಸೂರು ಅರಮನೆಯಲ್ಲಿ ಗಂಡು ಮರಿಗೆ ನೀಡಿದ ಲಕ್ಷ್ಮಿ
ಅವರು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜೊತೆಗೆ ವಿಧಾನಸಭಾ ಸ್ಪೀಕರ್ ಭೇಟಿ ಮಾಡಿದ್ದು ಪಕ್ಷಾಂತರ ಕಾನೂನಿನ ಅಡಿಯಲ್ಲಿ ಅನರ್ಹತೆಯೂ ತಪ್ಪಿದೆ. ಇಂದು ಬೆಳಗ್ಗೆ ಶಾಸಕರು ಸಭಾಧ್ಯಕ್ಷರನ್ನು ಭೇಟಿಯಾಗಿರುವುದು ಇದುವರೆಗೆ ಇದ್ದ ಊಹಾಪೋಹಗಳಿಗೆ ತೆರೆ ಎಳೆದಿದೆ. ನಂತರ ರಾಜ್ಯ ಬಿಜೆಪಿ ಮುಖ್ಯಸ್ಥ ಸದಾನಂದ ಶೇಟ್ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಮೈಕೆಲ್ ಲೋಬೋ ಅವರನ್ನು ಕಾಂಗ್ರೇಸ್ ವಿರೋಧ ಪಕ್ಷದ ನಾಯಕನ ಸ್ಥಾನದಿಂದ ತೆಗದ ನಂತರ ಬಿಜೆಪಿ ಕಾರ್ಯತಂತ್ರ ಜೊರಾಗಿತ್ತು ಕಳೆದ ಜುಲೈನಲ್ಲಿ ಕಾಂಗ್ರೆಸ್ ತನ್ನ ಕನಿಷ್ಠ ಏಳು ಶಾಸಕರನ್ನು ತನ್ನೊಂದಿಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರೂ ಈಗ ಛಿಧ್ರಗೊಂಡಿದೆ.