ವೋಟರ್ ಡೇಟಾ ಹಗರಣ : ಪೊಲೀಸ್ ಆಯುಕ್ತರಿಗೆ ಕಾಂಗ್ರೆಸ್ ದೂರು

Social Share

ಬೆಂಗಳೂರು,ನ.17- ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹಿ ಮಾಡಿರುವ ದೂರಿನ ಪ್ರತಿ ಯನ್ನು ಇಂದು ನಗರ ಪೊಲೀಸ್ ಆಯುಕ್ತ ಪ್ರತಾಪ್ರೆಡ್ಡಿ ಅವರಿಗೆ ನೀಡಲಾಗಿದೆ.

ಡಿ.ಕೆ.ಶಿವಕುಮಾರ್, ಸಿದ್ಧ ರಾಮಯ್ಯ, ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ನಾಯಕರ ನಿಯೋಗ ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದೂರು ನೀಡಿದೆ.

ದೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಚಿಲುಮೆ ಸಂಸ್ಥೆಯ ಮುಖ್ಯಸ್ಥರಾದ ರವಿಕುಮಾರ್ , ಕೃಷ್ಣಪ್ಪ, ಸಮೀಕ್ಷಾ ಆ್ಯಪ್ನ ಮಾಲೀಕರು ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಲಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ದತ್ತಾಂಶ ಸಂಗ್ರಹದ ಹೆಸರಿನಲ್ಲಿ ಅವ್ಯವಹಾರ ನಡೆದಿದ್ದು, ಐಟಿ ಕಾಯ್ದೆ 2000 ಸೆಕ್ಷನ್ 66ಸಿ, 72 ಎ , ಐಪಿಸಿ ಸೆಕ್ಷನ್ 120ಬಿ , 379, 403, 409, 414ರಡಿ ಅಪರಾಧ ವಾಗಿದೆ. ವೈಯಕ್ತಿಕ ಮಾಹಿತಿ ಸೋರಿಕೆ, ದತ್ತಾಂಶ ಕಳ್ಳತನ, ಸಂಚು, ಅಧಿಕಾರ ದುರುಪಯೋಗ ಸೇರಿದಂತೆ ಹಲವು ಆರೋಪದಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲಾಗಿದೆ.

ಕೈ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಐಟಿ ದಾಳಿ

ದೂರಿನಲ್ಲಿ ಹಗರಣಕ್ಕೆ ಸಮಗ್ರ ವಿವರ ನೀಡಿದ್ದು, ಪೂರಕ ದಾಖಲೆಗಳನ್ನು ಲಗತ್ತಿಸಲಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹಿ ಮಾಡಿರುವ ದೂರಿನ ಪ್ರತಿಯನ್ನು ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಯ ಅ„ಕಾರಿಗೆ ನೀಡಲಾಗಿದೆ.
ಡಿ.ಕೆ.ಶಿವಕುಮಾರ್, ಸಿದ್ಧ ರಾಮಯ್ಯ, ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ನಾಯಕರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.

ರಾಜಾಜಿನಗರದ ಟಿಕೆಟ್‌ಗಾಗಿ ಎಸ್.ನಾರಾಯಣ ಅರ್ಜಿ

ದೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಚಿಲುಮೆ ಸಂಸ್ಥೆಯ ಮುಖ್ಯಸ್ಥರಾದ ರವಿಕುಮಾರ್ , ಕೃಷ್ಣಪ್ಪ, ಸಮೀಕ್ಷಾ ಆ್ಯಪ್ನ ಮಾಲೀಕರು ಸೇರಿದಂತೆ ಹಲವರ ಹೆಸರನ್ನು ಉಲ್ಲೇಖಿಸಲಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ದತ್ತಾಂಶ ಸಂಗ್ರಹದ ಹೆಸರಿನಲ್ಲಿ ಅವ್ಯವಹಾರ ನಡೆದಿದ್ದು, ಐಟಿ ಕಾಯ್ದೆ 2000 ಸೆಕ್ಷನ್ 66ಸಿ, 72 ಎ , ಐಪಿಸಿ ಸೆಕ್ಷನ್ 120ಬಿ , 379, 403, 409, 414ರಡಿ ಅಪರಾಧವಾಗಿದೆ. ವೈಯಕ್ತಿಕ ಮಾಹಿತಿ ಸೋರಿಕೆ, ದತ್ತಾಂಶ ಕಳ್ಳತನ, ಸಂಚು, ಅ„ಕಾರ ದುರುಪಯೋಗ ಸೇರಿದಂತೆ ಹಲವು ಆರೋಪದಡಿ ಪ್ರಕರಣ ದಾಖಲಿಸುವಂತೆ ಒತ್ತಾಯಿಸಲಾಗಿದೆ. ದೂರಿನಲ್ಲಿ ಹಗರಣಕ್ಕೆ ಸಮಗ್ರ ವಿವರ ನೀಡಿದ್ದು, ಪೂರಕ ದಾಖಲೆಗಳನ್ನು ಲಗತ್ತಿಸಲಾಗಿದೆ.

#Congress, #Compplaint #VoterDataScam,

Articles You Might Like

Share This Article