ಖರ್ಗೆ ಹೆಸರಿಗಷ್ಟೇ ಕಾಂಗ್ರೆಸ್ ಅಧ್ಯಕ್ಷರು, ಈಗಲೂ ಜೀ ಹುಜೂರ್ ಸಂಸ್ಕೃತಿ ಇದೆ : ಬಿಜೆಪಿ ವ್ಯಂಗ್ಯ

Social Share

ಬೆಂಗಳೂರು,ಡಿ.13- ಕರ್ನಾಟಕ ಕಾಂಗ್ರೆಸ್ ಪಟಾಲಂ ದಿಲ್ಲಿಯಲ್ಲಿದೆ. ಕನ್ನಡಿಗ ಖರ್ಗೆ ಅವರೇ ಅಧ್ಯಕ್ಷರಾಗಿದ್ದರೂ ನಿರ್ಧಾರಕ್ಕೆ ಈಗಲೂ ಗಾಂಧಿ ಕುಟುಂಬಕ್ಕೇ ಜೋತು ಬಿದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಸ್ವಂತಿಕೆಯನ್ನೇ ಮರೆತು ಜೀ ಹುಜೂರ್ ಸಂಸ್ಕೃತಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯಾಧ್ಯಕ್ಷರಿಂದ ಹಿಡಿದು ಯುವ ಕಾಂಗ್ರೆಸ್ ಅಧ್ಯಕ್ಷರವರೆಗೂ ಬೇಲ್ ಮೇಲೆ ಬಾಳು ಸಾಗಿಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರು, ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪಕ್ಕದ ರಾಜ್ಯದಿಂದ ನಾಯಕರನ್ನು ಆಮದು ಮಾಡಿಕೊಂಡು ಅವರಿಂದಲೂ ರಾಜ್ಯವನ್ನು ಲೂಟಿ ಹೊಡೆಸಿ ಗೃಹಮಂತ್ರಿಗಳನ್ನಾಗಿಯೂ ಮಾಡಿದ್ದರು ಎಂದು ಟೀಕಿಸಿದೆ.

ಮಹದಾಯಿ ಯೋಜನೆಗೆ ಅನುಮೋದನೆ ಸಿಗುವುದಾಗಿ ಕಾರಜೋಳ ವಿಶ್ವಾಸ

ಡಬಲ್ ಎಂಜಿನ್ ವೇಗದ ಅಭಿವೃದ್ಧಿಯನ್ನು ರಾಜ್ಯಕ್ಕೆ ನೀಡಲು ತಲೆ ಕೆಳಗಾಗಿ ನಿಂತರೂ ಸಾಧ್ಯವಾಗದ ಕಾಂಗ್ರೆಸ್ ಯಾವ ಮಟ್ಟಕ್ಕಾದರೂ ಇಳಿದು ಅಧಿಕಾರಕ್ಕೆ ಬಂದು ರಾಜ್ಯವನ್ನು ಎಟಿಎಂ ಆಗಿ ಮಾಡಿಕೊಂಡು ಲೂಟಿ ಹೊಡೆಯಲು ಹವಣಿಸುತ್ತಿದೆ. ಕನ್ನಡಿಗರು ಇದನ್ನು ಎಂದಿಗೂ ಸಾಧ್ಯವಾಗಿಸುವುದಿಲ್ಲ ಎಂದಿದೆ.

Congress, Delhi, BJP, tweet war,

Articles You Might Like

Share This Article