Tuesday, May 21, 2024
Homeರಾಜ್ಯಕಾಂಗ್ರೆಸ್ ಚುನಾವಣಾ ಸಮಿತಿ ಸಭೆ

ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ

ಬೆಂಗಳೂರು,ಜ.19- ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಒಂದೇ ಕಂತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧಪಟ್ಟಂತೆ ಇಂದು ಪಕ್ಷದ ರಾಜ್ಯ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯಕಾರಿ ಮಂಡಳಿ ಸದಸ್ಯ ಸಯ್ಯದ್ ನಾಸಿರ್ ಹುಸೇನ್, ಸಚಿವರಾದ ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರೆಹಮಾನ್ ಖಾನ್, ಕೆ.ಜೆ. ಜಾರ್ಜ್, ಶಿವಾನಂದ ಪಾಟೀಲ್, ಜಮೀರ್ ಅಹಮ್ಮದ್ ಖಾನ್,

ಎಚ್.ಸಿ.ಮಹದೇವಪ್ಪ, ಚೆಲುವರಾಯಸ್ವಾಮಿ, ಶಿವರಾಜ್ ತಂಗಡಗಿ, ಎನ್.ಎಸ್.ಬೋಸ್‍ರಾಜ್, ಮಾಜಿ ಮುಖ್ಯಮಂತ್ರಿ ಗಳಾದ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್ ಸೇರಿದಂತೆ 48 ಮಂದಿ ಸದಸ್ಯರು, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಯುವಕಾಂಗ್ರೆಸ್, ವಿದ್ಯಾರ್ಥಿ ಕಾಂಗ್ರೆಸ್, ಮಹಿಳಾ ಘಟಕ, ಸೇವಾ ದಳ ಸೇರಿದಂತೆ ಮುಂಚೂಣಿ ಘಟಕಗಳ 10 ಮಂದಿ ವಿಶೇಷ ಆಹ್ವಾನಿತರನ್ನೊಳಗೊಂಡ 58 ಮಂದಿ ಸಭೆಯಲ್ಲಿ ಭಾಗವಹಿಸಲಿ ದ್ದಾರೆ.

ಸಭೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಒಂದೇ ಕಂತಿನಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಚುನಾವಣಾ ಸಂಯೋಜಕರಾಗಿ ರುವ ಸಚಿವರು ಹಾಗೂ ವೀಕ್ಷಕರು ಗಳ ವರದಿ ಆಧರಿಸಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಮಾನ ದಂಡಗಳನ್ನು ಚರ್ಚಿಸಲಾಗುತ್ತದೆ. ಬಳಿಕ ಪ್ರತೀ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‍ಗೆ ಶಿಫಾರಸ್ಸು ಮಾಡುವ ಸಾಧ್ಯತೆಯಿದೆ.

ಅದರಲ್ಲಿ ಸುಮಾರು 15 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಒಂದೇ ಅಭ್ಯರ್ಥಿ ಹೆಸರನ್ನು ಕಳುಹಿಸಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಬಹುತೇಕ ಫೆಬ್ರವರಿ ಅಂತ್ಯದ ವೇಳೆಗೆ ಕಾಂಗ್ರೆಸ್‍ನ ಅಭ್ಯರ್ಥಿ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆಯಿದೆ. ಗೆಲ್ಲುವ ಅಭ್ಯರ್ಥಿಗಳಿಗೆ ಒತ್ತು ನೀಡು ವುದು ಮೊದಲ ಆದ್ಯತೆಯಾಗಿದ್ದರೆ, ಪಕ್ಷನಿಷ್ಠೆ, ಸಮುದಾಯ ವಾರು ಸಾಮಾಜಿಕ ನ್ಯಾಯಕ್ಕೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ.

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಹುವಾ ಮೊಯಿತ್ರಾ

ಕಳಂಕಿತರು ಹಾಗೂ ಅಪರಾಧದ ಹಿನ್ನೆಲೆ ಉಳ್ಳವರಿಗೆ ಚುನಾವಣೆಯಲ್ಲಿ ಸ್ರ್ಪಧಿಸಲು ಅವಕಾಶ ನೀಡದಿರುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಆದಷ್ಟು ವಿವಾದರಹಿತವಾದ ಮತ್ತು ಜನಪ್ರಿಯತೆಗೊಂಡಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಸುಮಾರು 5 ಕ್ಷೇತ್ರಗಳಲ್ಲಿ ಸಚಿವರ ಹೆಸರುಗಳು ಪ್ರಬಲವಾಗಿ ಕೇಳಿಬಂದಿವೆ. ಕೆಲವು ಸ್ಪರ್ಧೆಗೆ ಹಿಂದೇಟು ಹಾಕಿದರೂ ಕೂಡ ಹೈಕಮಾಂಡ್ ಗೆಲ್ಲುವ ಸಾಧ್ಯತೆ ಆಧರಿಸಿ ಸಚಿವರ ಸ್ಪರ್ಧೆಗೆ ಸೂಚನೆ ನೀಡುವ ನಿರೀಕ್ಷೆಗಳಿವೆ. ಈ ಹಿನ್ನೆಲೆಯಲ್ಲಿ ಇಂದು ನಡೆಯುವ ಸಭೆಯಲ್ಲಿ ಮಹತ್ವದ ಚರ್ಚೆಗಳಾಗಲಿವೆ ಎಂದು ಮೂಲಗಳು ತಿಳಿಸಿವೆ.

RELATED ARTICLES

Latest News