ಲಕ್ನೋ,ಡಿ.2- ಉತ್ತರಪ್ರದೇಶದ ರಾಂಪುರ ಸದರ್ ವಿಧಾನಸಭಾಗೆ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿದ ಆರೋಪದ ಮೇಲೆ ಮಾಜಿ ಶಾಸಕ ನವಾಬ್ ಕಾಜಿಮ್ ಅಲಿ ಖಾನ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಉಪಚುನಾವಣೆಯಲ್ಲಿ ನವಾಬ್ ಅವರು ಬಿಜೆಪಿ ಪಕ್ಷದ ಅಭ್ಯರ್ಥಿ ಪರ ಮತ ಪ್ರಚಾರ ನಡೆಸುತ್ತಿರುವ ಬಗ್ಗೆ ಬಂದ ದೂರುಗಳನ್ನು ಪರಿಶೀಲಿಸಿದ ನಂತರ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲು ತೀರ್ಮಾನಿಸಲಾಯಿತು ಎಂದು ಕಾಂಗ್ರೆಸ್ ಪಕ್ಷದ ವಕ್ತಾರ ಅಶೋಕ್ ಸಿಂಗ್ ತಿಳಿಸಿದ್ದಾರೆ.
ಯುಪಿ ಡಿಸಿಎಂಗಳಿಗೆ ಬಂಪರ್ ಆಫರ್ ನೀಡಿದ ಅಖಿಲೇಶ್ ಯಾದವ್
ದ್ವೇಷ ಭಾಷಣ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಅಜಂ ಖಾನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಕಾರಣ ರಾಂಪುರ ಸದರ್ ವಿಧಾನಸಭೆಗೆ ಉಪಚುನಾವಣೆ ನಡೆಯುತ್ತಿದೆ.
ಗಾಯಕ ಸಿಧು ಮೂಸೆವಾಲಾ ಹಂತಕ ಗೋಲ್ಡಿ ಅಮೆರಿಕಾದಲ್ಲಿ ಸೆರೆ..!
2016ರಲ್ಲಿ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಅವರನ್ನು ಪಕ್ಷದಿಂದ ಹೊರಹಾಕಲಾಗಿತ್ತು. ಇದೀಗ ಮತ್ತೆ ಬಿಜೆಪಿ ಪರ ಪ್ರಚಾರ ಮಾಡಲು ಹೋಗಿ ಮತ್ತೆ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ.
Congress, expels, Former, MLA, Nawab Kazim, supporting, BJP,