ರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ಯಾರಾಗ್ತಾರೆ ಕಾಂಗ್ರೆಸ್ ಅಭ್ಯರ್ಥಿ..?

ನವದೆಹಲಿ,ಮಾ.29- ಉತ್ತರಪ್ರದೇಶದಲ್ಲಿ ಸ್ಪರ್ಧಿಸಲಿರುವ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಬಾಕಿ ಉಳಿದಿರುವ ರಾಯ್ ಬರೇಲಿ ಮತ್ತು ಅಮೇಥಿ ಕ್ಷೇತ್ರಕ್ಕೆ ಏಪ್ರಿಲ್ ಅಂತ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಲಿದೆ ಎಂದು ಮೂಲಗಳು ಹೇಳಿವೆ. ಐದನೇ ಹಂತದ ಮತದಾನದಲ್ಲಿ ಬರುವ ಈ ಕ್ಷೇತ್ರಗಳಿಗೆ ಏಪ್ರಿಲ್ 26ರಿಂದ ಚುನಾವಣಾ ಅಧಿಸೂಚನೆ ಜಾರಿಗೆ ಬರಲಿದೆ. ಈ ಹಿನ್ನಲೆ ಹೈಕಮಾಂಡ್ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ರಾಯ್ ಬರೇಲಿ ಮತ್ತು ಅಮೇಥಿ ಸ್ಥಾನಗಳಿಗೆ ಅಭ್ಯರ್ಥಿಗಳ ಬಗ್ಗೆ ಚರ್ಚೆಗಳು ನಡೆದಿವೆ. … Continue reading ರಾಯ್ ಬರೇಲಿ ಮತ್ತು ಅಮೇಥಿಯಲ್ಲಿ ಯಾರಾಗ್ತಾರೆ ಕಾಂಗ್ರೆಸ್ ಅಭ್ಯರ್ಥಿ..?