Saturday, May 3, 2025
Homeರಾಜ್ಯಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲೆತ್ನಿಸುತ್ತಿದೆ : ವಿಜಯೇಂದ್ರ ಕಿಡಿ

ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲೆತ್ನಿಸುತ್ತಿದೆ : ವಿಜಯೇಂದ್ರ ಕಿಡಿ

Congress government is trying to create a Kashmiri situation in Karnataka: Vijayendra

ಬೆಂಗಳೂರು,ಮೇ.2- ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಕಾಂಗ್ರೆಸ್ ಸರ್ಕಾರ ಹೊರಟಂತೆ ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ
ಕಿಡಿಕಾಡಿದ್ದಾರೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಎಕ್ಸ್ ಜಾಲತಾಣದಲ್ಲಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಪಹಲ್ಲಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಸುದ್ದಿ ಹಸಿಯಾಗಿರುವಾಗಲೇ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆಯನ್ನು ನೋಡಿದರೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಕಾಶ್ಮೀರ ಪರಿಸ್ಥಿತಿ ನಿರ್ಮಾಣ ಮಾಡಲು ಹೊರಟಂತೆ ಕಾಣುತ್ತಿದೆ. ಕರ್ನಾಟಕದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆಗಳು ನಿರಂತರವಾಗಿ ನಡೆಯುತ್ತಿದ್ದು, ರಾಜ್ಯದ ಜನತೆ ತೀವ್ರ ಆತಂಕಿತರಾಗಿದ್ದಾರೆ ಎಂದು ಟೀಕಿಸಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಆಪೋಶನ ಮಾಡಿಕೊಂಡಿರುವ ಗೂಂಡಾಗಳು, ಸಮಾಜಘಾತುಕ ಶಕ್ತಿಗಳು ಕೊಲೆ, ಸುಲಿಗೆ, ಅತ್ಯಾಚಾರ ಹಾಗೂ ದೌರ್ಜನ್ಯಗಳಲ್ಲಿ ನಿರತವಾಗಿವೆ. ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಭೀಕರ ಕೊಲೆ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ.

ಮತೀಯವಾದಿ ಹಿಂದೂ ವಿರೋಧಿ ರಕ್ಕಸರು ನಡು ರಸ್ತೆಯಲ್ಲೇ ಅಟ್ಟಹಾಸಗೈದು ಕೊಲೆಗೈಯುತ್ತಿರುವ ದೃಶ್ಯ ನಾವು ಯಾವ ನೆಲದಲ್ಲಿ ವಾಸಿಸುತ್ತಿದ್ದೇವೆ ಎಂಬ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ.

ಈ ಅಮಾನುಷ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಸುಹಾಸ್ ಬರ್ಬರ ಕೊಲೆಗೀಡಾಗಿರುವ ಘಟನೆಯ ಹಿನ್ನೆಲೆ ಪೂರ್ವನಿಯೋಜಿತ ಎನ್ನುವುದು ಸುಸ್ಪಷ್ಟ, ಈ ಹಿನ್ನೆಲೆಯಲ್ಲಿ ಇದು ಗುಪ್ತಚರ ಇಲಾಖೆಯ ವೈಫಲ್ಯವೋ? ಕಾನೂನು ಸುವ್ ಯವಸ್ಥೆಯ ಜವಾಬ್ದಾರಿ ಹೊತ್ತವರ ಹೊಣೆಗೇಡಿತನ ಕಾರಣವೋ? ಎಂಬ ಬಗ್ಗೆ ಸೂಕ್ತ ತನಿಖೆ ನಡೆಯಬೇಕಿದೆ ಎಂದು ಒತ್ತಾಯಿಸಿದ್ದಾರೆ.

RELATED ARTICLES

Latest News