Monday, December 2, 2024
Homeರಾಜಕೀಯ | Politicsಕಾಂಗ್ರೆಸ್‌‍ ಸರ್ಕಾರಕ್ಕೆ ಬಡ ಕುಟುಂಬಗಳ ಶಾಪ ತಟ್ಟಲಿದೆ : ವಿಜಯೇಂದ್ರ

ಕಾಂಗ್ರೆಸ್‌‍ ಸರ್ಕಾರಕ್ಕೆ ಬಡ ಕುಟುಂಬಗಳ ಶಾಪ ತಟ್ಟಲಿದೆ : ವಿಜಯೇಂದ್ರ

Congress government will be cursed by poor families: Vijayendra

ಬೆಂಗಳೂರು,ನ.21- ಆಮಿಷಗಳನ್ನೊಡ್ಡಿ ಮತ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್‌‍ ಒಂದೂವರೆ ವರ್ಷ ಕಳೆಯುವ ಮುನ್ನವೇ ಉಂಡೂ ಹೋದ ಕೊಂಡೂ ಹೋದ ಎಂಬ ಗಾದೆಯಂತೆ ಲಕ್ಷಾಂತರ ಬಡ ಕುಟುಂಬಗಳನ್ನು ಸಂಕಷ್ಟದ ಸ್ಥಿತಿಗೆ ತಳ್ಳುತ್ತಿರುವ ಕಾಂಗ್ರೆಸ್‌‍ ಸರ್ಕಾರಕ್ಕೆ ಕಡುಬಡವರ ಶಾಪ ತಟ್ಟದೇ ಇರಲಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಖ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಿಪಿಎಲ್‌ ಪಡಿತರ ಚೀಟಿಗಳನ್ನು ರದ್ದು ಮಾಡುತ್ತಿರುವ ರಾಜ್ಯದ ಜನವಿರೋಧಿ ಕಾಂಗ್ರೆಸ್‌‍ ಸರ್ಕಾರದ ನಡೆ ಗಮನಿಸಿದರೆ ಬಡವರ ಹೊಟ್ಟೆಯ ಮೇಲೆ ಬರೆ ಎಳೆಯುತ್ತಿರುವುದು ಸುಸ್ಪಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.

ಮಾನದಂಡಗಳ ನೆಪವೊಡ್ಡಿ ನಾಡಿನ 11 ಲಕ್ಷಕ್ಕೂ ಹೆಚ್ಚು ಕುಟುಂಬಗಳ ಬಿಪಿಎಲ್‌ ಕಾರ್ಡುಗಳನ್ನು ರದ್ದು ಮಾಡಿ ಅನ್ನಭಾಗ್ಯ ಯೋಜನೆಯ ಜತೆಗೆ ಗೃಹಲಕ್ಷಿ ಹಣಕ್ಕೂ ಕತ್ತರಿ ಪ್ರಯೋಗಿಸಿ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಹೊರಟಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News