Friday, November 22, 2024
Homeರಾಜಕೀಯ | Politicsದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ : ಕುಮಾರಸ್ವಾಮಿ

ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ : ಕುಮಾರಸ್ವಾಮಿ

ಮೈಸೂರು,ಮೇ22-ವಿರೋಧಿಗಳಿಗೆ ತೊಂದರೆ ಕೊಡುವುದು, ದ್ವೇಷ ರಾಜಕಾರಣ ಮಾಡುವುದಷ್ಟೇ ಕಾಂಗ್ರೆಸ್‌‍ ಸರ್ಕಾರದ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ದಿ ವಿಚಾರದಲ್ಲಿ ನಮನ್ನು ಟೀಕೆ ಮಾಡುವ ನೈತಿಕತೆ ಮುಖ್ಯಮಂತ್ರಿಯವರಿಗಿಲ್ಲ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದಾರೆ. ಈಗಲಾದರೂ ಮೈಸೂರು ಜಿಲ್ಲೆಯ ಅಭಿವೃದ್ಧಿ ಮಾಡಲಿ. ಮೈಸೂರು ಅಭಿವೃದ್ಧಿಗೆ ಸಿದ್ದರಾಮಯ್ಯನವರ ಕೊಡುಗೆ ಏನೆಂಬುದನ್ನು ಹೇಳಲಿ ಎಂದು ಆಗ್ರಹಿಸಿದರು.ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಕಲುಷಿತ ನೀರು ಕುಡಿದು ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ಕು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಸಿದ್ದರಾಮಯ್ಯನವರು ಯಾವ ರೀತಿ ಕೆಲಸ ಮಾಡಿದ್ದಾರೆ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದು ಟೀಕಿಸಿದರು.

ಬಿಜೆಪಿಯನ್ನು ದೂರುವುದಷ್ಟೇ ಕಾಂಗ್ರೆಸ್‌‍ನ ಕೆಲಸವಾಗಿದೆ. ರಾಜ್ಯದ ಹಲವೆಡೆ ಬೆಳೆ ನಾಶವಾಗಿದ್ದರೂ ಸರ್ಕಾರ ಹೇಳಿಕೆಗೆ ಮಾತ್ರ ಸೀಮಿತವಾಗಿದೆ. ರಾಜ್ಯದಲ್ಲಿ ರೈತರ ಆತಹತ್ಯೆಗಳು ನಿಂತಿಲ್ಲ. ಈ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆಯೋ ಇಲ್ಲವೋ ಅದು ಗೊತ್ತಿಲ್ಲ. ಮದ್ದೂರು ಮತ್ತು ಗದಗದಲ್ಲಿ ರೈತರು ಆತಹತ್ಯೆ ಮಾಡಿಕೊಂಡಿದ್ದಾರೆ. ಅವರ ಮನೆಗಳಿಗೆ ಹೋಗಿ ಸಾಂತ್ವಾನ ಹೇಳುವ ಕೆಲಸವನ್ನು ಸರ್ಕಾರದಿಂದ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಸರ್ಕಾರದ ಪ್ರಾಯೋಜಕತ್ವದಲ್ಲಿ ಮೇ 30ರಂದು ಹಾಸನದಲ್ಲಿ ಪ್ರತಿಭಟನೆ ಆಯೋಜಿಸಲಾಗುತ್ತಿದ್ದು, ಅಂಗನವಾಡಿ ಕಾರ್ಯಕರ್ತರನ್ನು ಪ್ರತಿಭಟನೆಗೆ ಕರೆತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ನನಗೆ ಹೇಳಿದರೆ ನಾನೇ ಒಂದಿಷ್ಟು ಮಹಿಳೆಯರನ್ನು ಪ್ರತಿಭಟನೆಗೆ ಕಳುಹಿಸಿಕೊಡುತ್ತಿದ್ದೆ ಎಂದು ವ್ಯಂಗ್ಯವಾಡಿದ್ದಾರೆ.

RELATED ARTICLES

Latest News