Friday, April 19, 2024
Homeರಾಜ್ಯಚುನಾವಣಾ ಅಧಿಕಾರಿಗಳಿಗೆ 40 ಸ್ಟಾರ್ ಪ್ರಚಾರಕರ ಪಟ್ಟಿ ಸಲ್ಲಿಸಿದ ಕಾಂಗ್ರೆಸ್

ಚುನಾವಣಾ ಅಧಿಕಾರಿಗಳಿಗೆ 40 ಸ್ಟಾರ್ ಪ್ರಚಾರಕರ ಪಟ್ಟಿ ಸಲ್ಲಿಸಿದ ಕಾಂಗ್ರೆಸ್

ಬೆಂಗಳೂರು,ಮಾ.31- ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ 40 ಮಂದಿಯ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷರಾದ ಸೋನಿಯಾಗಾಂಧಿ, ರಾಹುಲ್‍ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಪ್ರಿಯಾಂಕ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ, ಜಯರಾಂ ರಮೇಶ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಶಾಸಕರಾದ ಲಕ್ಷ್ಮಣ್ ಸವದಿ, ಯುವ ಕಾಂಗ್ರೆಸ್‍ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್‍ಕುಮಾರ್ ಸೊರಕೆ, ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಅವಕಾಶ ನೀಡಲಾಗಿದೆ.

ಸಚಿವರಲ್ಲಿ ಕೆ.ಜೆ.ಜಾರ್ಜ್, ಡಾ.ಜಿ.ಪರಮೇಶ್ವರ್, ಎಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಜಮೀರ್ ಅಹಮ್ಮದ್ ಖಾನ್, ಮಧು ಬಂಗಾರಪ್ಪ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಹಿರಿಯ ನಾಯಕರಾದ ಆರ್.ವಿ.ದೇಶಪಾಂಡೆ, ಎಚ್.ಎಂ.ರೇವಣ್ಣ, ಸಿಂಧ್ಯಾ, ಡಿ.ಸೋಮಶೇಖರ್, ಎಲ್.ಹನುಮಂತಯ್ಯ, ಸಯ್ಯದ್ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಪಿ.ಟಿ.ಪರಮೇಶ್ವರ್ ನಾಯಕ್, ತನ್ವೀರ್ ಸೇಠ್, ಪುಷ್ಪಾ ಅಮರ್ ನಾಥ್, ಉಮಾಶ್ರೀ ಹಾಗೂ ಎಐಸಿಸಿಯ ಕೆಲ ನಾಯಕರು ಸ್ಟಾರ್ ಪ್ರಚಾರಕರಾಗಿದ್ದಾರೆ.

RELATED ARTICLES

Latest News