Wednesday, July 16, 2025
Homeರಾಜಕೀಯ | Politicsಸಿಎಂ ಸ್ಥಾನ ನಿಭಾಯಿಸುವ ಸಮರ್ಥ ನಾಯಕನಿಲ್ಲದೆ ತ್ರಿಶಂಕು ಸ್ಥಿತಿಯಲ್ಲಿ ಕಾಂಗ್ರೆಸ್‌‍ ಹೈಕಮಾಂಡ್‌ : ಅಶೋಕ್‌ ವ್ಯಂಗ್ಯ

ಸಿಎಂ ಸ್ಥಾನ ನಿಭಾಯಿಸುವ ಸಮರ್ಥ ನಾಯಕನಿಲ್ಲದೆ ತ್ರಿಶಂಕು ಸ್ಥಿತಿಯಲ್ಲಿ ಕಾಂಗ್ರೆಸ್‌‍ ಹೈಕಮಾಂಡ್‌ : ಅಶೋಕ್‌ ವ್ಯಂಗ್ಯ

Congress high command in limbo without a capable leader to handle the CM post

ಬೆಂಗಳೂರು,ಜು.16– ಕಾಂಗ್ರೆಸ್‌‍ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಒಬ್ಬ ನಾಯಕನೂ ಇಲ್ಲದೆ ಎಐಸಿಸಿಯ ಹೈಕಮಾಂಡ್‌ ತ್ರಿಶಂಕು ಸ್ಥಿತಿಯಲ್ಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ರಣದೀಪ್‌ ಆಡಳಿತ ಜಾರಿ ಆಗಿದೆಯಾ? ಗುರುವಾರದ ಸಂಪುಟ ಸಭೆಯೂ ಸುರ್ಜೆವಾಲಾ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಾ?

ಲಾಟರಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಸಂಪೂರ್ಣವಾಗಿ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್‌‍ ಹೈಕಮಾಂಡ್‌ ಕರ್ನಾಟಕದಲ್ಲಿ ರಣದೀಪ್‌ ಆಡಳಿತ ಹೇರಿದೆ ಎಂದು ಆಪಾದಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಂಚತಾರಾ ಹೋಟೆಲ್‌ ಗಳಲ್ಲಿ ಅತೃಪ್ತ ಶಾಸಕಾರ ದೂರು-ದುಮಾನ ಕೇಳುತ್ತಿರುವ, ಮಂತ್ರಿಗಳ ಸಾಧನೆ ಪರಾಮರ್ಶೆ ಮಾಡುತ್ತಿರುವ ರಣಜಿತ್‌ ಸಿಂಗ್‌ ಸುರ್ಜೇವಾಲ ಅವರು, ಗುರುವಾರ ವಿಧಾನಸೌಧದಲ್ಲಿ ನಡೆಯುವ ಸಂಪುಟ ಸಭೆಗೂ ಬಂದು ತಾವೇ ಅಧ್ಯಕ್ಷತೆ ವಹಿಸಿದರೂ ಅಚ್ಚರಿ ಪಡಬೇಕಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಹಿಡಿತವಿಲ್ಲ, ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಶಾಸಕರ ಬೆಂಬಲ ಇಲ್ಲ, ತಮಗೆ ಬೇಕಾದವರನ್ನು ಸಿಎಂ ಆಗಿ ನೇಮಕ ಮಾಡಲು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರಿಗೆ ಶಕ್ತಿ ಇಲ್ಲ ಎಂದು ಆಶೋಕ್‌ ಕುಹಕವಾಡಿದ್ದಾರೆ.

RELATED ARTICLES

Latest News