Sunday, April 28, 2024
Homeರಾಜ್ಯಸೈದ್ಧಾಂತಿಕ ಸಂಘರ್ಷಕ್ಕೆ ಮುಂದಾದ ಕಾಂಗ್ರೆಸ್

ಸೈದ್ಧಾಂತಿಕ ಸಂಘರ್ಷಕ್ಕೆ ಮುಂದಾದ ಕಾಂಗ್ರೆಸ್

ಬೆಂಗಳೂರು,ಜ.23- ಸಮಾಜ ವಿಭಜನೆಯ ಸೈದ್ಧಾಂತಿಕ ಸಂಘರ್ಷಕ್ಕೆ ಗಾಂಧಿತತ್ವದ ಮೂಲಕ ತಿರುಗೇಟು ನೀಡಲು ಮುಂದಾಗಿರುವ ರಾಜ್ಯಸರ್ಕಾರ ಪ್ರತಿಯೊಂದು ಶಾಲಾ ಕಾಲೇಜಿನಲ್ಲಿ 21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳ ಪ್ರತಿಪಾದಿಸುವ ಕುರಿತು ಪ್ರಬಂಧ ಸ್ಪರ್ಧೆ ನಡೆಸಲು ಮುಂದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರವಿದೆ. ಆದ್ದರಿಂದ 6ನೇ ತರಗತಿ ನಂತರ ಪ್ರತಿ ಶಾಲೆ ಮತ್ತು ಕಾಲೇಜಿನಲ್ಲಿ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಗಾಂಧೀಜಿಯವರನ್ನು ಅರಿತುಕೊಳ್ಳಲು ಅವಕಾಶ ಒದಗಿಸಬೇಕು. ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೂ ಸೂಕ್ತ ಬಹುಮಾನ ನೀಡಬೇಕು. ಉಳಿದವರ ಭಾಗವಹಿಸುವಿಕೆಗಾಗಿ ಪ್ರಶಂಸನಾ ಪತ್ರಗಳನ್ನು ನೀಡಬೇಕು ಎಂದು ಸೂಚಿಸಿದ್ದಾರೆ.

ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿ, ಸಂಶೋಧನಾ ವಿದ್ಯಾರ್ಥಿಗಳವರೆಗೂ ಪ್ರಬಂಧ ಸ್ಪರ್ಧೆ ನಡೆಯಲಿದೆ. ಎಸ್‍ಎಸ್‍ಎಲ್‍ಸಿ, ಪಿಯುಸಿ ಪರೀಕ್ಷೆಗೆ ಪೂರ್ವ ತಯಾರಿ ನಡೆಸುತ್ತಿರುವ ಮಕ್ಕಳನ್ನು ಹೊರತುಪಡಿಸಿ ಉಳಿದ ಎಲ್ಲರೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ರಾಷ್ಟ್ರಪಿತ ಮಹಾತ್ಮಗಾಂಧಿಯವರ ಹತ್ಯೆಯಾಗಿ ಏಳೂವರೆ ದಶಕಗಳು ಮುಗಿದಿವೆ. ಗಾಂಧೀಜಿಯವರು ತಮ್ಮ ಜೀವಿತಾವಧಿಯವರೆಗೂ ಶಾಂತಿ, ಅಹಿಂಸೆ, ಸತ್ಯ, ವಿಕೇಂದ್ರೀಕರಣ, ಸಾಮಾಜಿಕ ನ್ಯಾಯ ಮುಂತಾದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದರು. ದೇಶದ ವೈವಿಧ್ಯತೆ ಎಲ್ಲರನ್ನೂ ಒಳಗೊಂಡು ಬಾಳುವ ಅನಿವಾರ್ಯತೆಯನ್ನು ಸಾರಿದರು. ಇಂತಹ ಮಹಾನ್ ವ್ಯಕ್ತಿಯನ್ನು ಕೆಲವು ಧುರೀಣರು ಪಿತೂರಿ ಹತ್ಯೆ ಮಾಡಿದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ ಇರಬೇಕು ; ಮಸ್ಕ್

ಗಾಂಧೀಜಿಯವರ ಹತ್ಯೆಯ ನಂತರ ದೇಶ ನಿರಂತರವಾಗಿ ಅವರ ಆದರ್ಶಗಳನ್ನು ಸಾಧ್ಯವಾದ ಮಟ್ಟಿಗೆ ಅನುಷ್ಠಾನ ಮಾಡಿಕೊಂಡೇ ಬಂದಿದೆ. ಇತ್ತೀಚೆಗೆ ದ್ವೇಷ, ಹಿಂಸೆಯನ್ನು ಪ್ರತಿಪಾದಿಸುವ ವಿಕೇಂದ್ರೀಕರಣವನ್ನು ಗಮನಿಸಿ ಕೇಂದ್ರೀಕರಣಕ್ಕೆ ಒತ್ತು ನೀಡುವ, ದೀನ ದಲಿತ ಮಹಿಳೆ, ಆದಿವಾಸಿ, ರೈತ, ಕಾರ್ಮಿಕ ಹಾಗೂ ಯುವಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗಿವೆ ಎಂದು ಆರೋಪಿಸಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿಜಿಯವರ ವಿರುದ್ಧ ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲೂ ಭಾಗವಹಿಸಿದ ಶಕ್ತಿಗಳು ಪ್ರವರ್ಗಮಾನಕ್ಕೆ ಬರಲು ಪ್ರಯತ್ನಿಸುತ್ತಿವೆ. ಜಾಗತಿಕ ಪರಿಸರದ ಬಿಕ್ಕಟ್ಟುಗಳು, ಕೃತಕ ಬುದ್ಧಿಮತ್ತೆ, ಹಿಂಸಾ ವಿನೋದ ಮುಂತಾದವುಗಳಿಂದಾಗಿ ಮನುಷ್ಯರು ಈ ಭೂಮಿಯ ಮೇಲಿಂದಲೇ ಅಳಿಸಿಹೋಗುವ ದುಸ್ಥಿತಿಗೆ ತಲುಪಿಯಾಗಿದೆ ಎಂದು ಸ್ಟೀಫನ್ ಹಾಕಿಂಗ್ ಸೇರಿದಂತೆ ಮುಂತಾದ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ದೊಡ್ಡ ಭಾಷೆಗಳು ಸಣ್ಣ ಭಾಷೆಗಳನ್ನು ನುಂಗಿಹಾಕುತ್ತಿವೆ. ಯಾವುದೇ ಸಮಾಜ ಅಥವಾ ಸಮುದಾಯದಲ್ಲಿ ತಮ್ಮ ಭಾಷೆಗಳನ್ನು ಕಳೆದುಕೊಳ್ಳುವುದೆಂದರೆ ಅಸ್ತಿತ್ವವನ್ನೇ ಕಳೆದುಕೊಂಡಂತೆ ಎಂದು ಸಾಬೀತಾಗಿದೆ. ಪ್ರಸ್ತುತದ ಬಹುತೇಕ ಸಮಸ್ಯೆಗಳಿಗೆ ಗಾಂೀಜಿಯವರ ವಿಚಾರಗಳಲ್ಲಿ ಪರಿಹಾರ ಇರುವುದರಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಧೀಜಿ ವಿಚಾರಧಾರೆಗಳನ್ನು ಅಳವಡಿಕೆ ಮಾಡಿಕೊಳ್ಳಲು ಪ್ರಬಂಧ ಸ್ಪರ್ಧೆ ಆಯೋಜಿಸುವಂತೆ ಸಲಹೆ ನೀಡಲಾಗಿದೆ.

RELATED ARTICLES

Latest News