ಬೆಂಗಳೂರು,ಮಾ.7- ಬಿಜೆಪಿ ಸರ್ಕಾರದ ಭ್ರಷ್ಟಚಾರ ವಿರೋಸಿ ಮಾರ್ಚ್ 9ರಂದು ಬೆಳಗ್ಗೆ 9ರಿಂದ 11 ಗಂಟೆಯವರೆಗೂ ಕಾಂಗ್ರೆಸ್ ನಡೆಸುತ್ತಿರುವ ಕರ್ನಾಟಕ ಬಂದ್ ನಿಂದ ಜನ ಸಾಮಾನ್ಯರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‍ಸಿಂಗ್ ಸುರ್ಜೇವಾಲ ಹೇಳಿದ್ದಾರೆ.
ಅಂಗಡಿಗಳನ್ನು ಮುಚ್ಚಿ ಸಾಂಕೇತಿಕವಾಗಿ ಬಂದ್‍ಗೆ ಸಹಕರಿಸುವಂತೆ ಮಾರುಕಟ್ಟೆ ಭಾದ್ಯಸ್ಥರಿಗೆ ಮನವಿ ಮಾಡಿರುವ ಅವರು, ರಸ್ತೆ, ರೈಲು ಸಂಚಾರ, ಶೈಕ್ಷಣಿಕ ಚಟುವಟಿಕೆಗಳು, ಆಸ್ಪತ್ರೆ, ಅಗತ್ಯ ಸೇವೆಗಳು, ಪರೀಕ್ಷೆಗಳು ಬಂದ್ ಹೊರತಾಗಿರಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರೀತಿ ನಿರಾಕರಿಸಿದ ಯುವತಿಯನ್ನು ಕೊಂದ ಹುಚ್ಚು ಪ್ರೇಮಿ
ಮೈಸೂರು ಸ್ಯಾಂಡಲ್ ಸೋಪ್ ಹಗರಣ ಬೆಳಕಿಗೆ ಬಂದು ಐದು ದಿನ ಕಳೆದಿದೆ. ಈವರೆಗೂ ಮೊದಲ ಆರೋಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದಾರೆ. ಬಿಜೆಪಿ ಅಥವಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈವರೆಗೂ ವಿರೂಪಾಕ್ಷಪ್ಪ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆದುಕೊಂಡಿಲ್ಲ. ಬಿಜೆಪಿ ಸರ್ಕಾರವನ್ನು ಹೊರ ಹಾಕುವ ಕಾಲ ಇದಾಗಿದೆ ಎಂದು ಸುರ್ಜೇವಾಲ ಹೇಳಿದ್ದಾರೆ.
Congress, Karnataka, bandh, March 9, Randeep Singh Surjewala,