ನವದೆಹಲಿ, ಆ.4- ಹರ್ಯಾಣ ಕಾಂಗ್ರೆಸ್‍ನ ಹಿರಿಯ ನಾಯಕ ಕುಲದೀಪ್ ಬಿಸೋಣಿ ಇಂದು ಬಿಜೆಪಿ ಸೇರಿದ್ದಾರೆ. ಜೂನ್‍ನಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ್ದ ಅವರನ್ನು ಕಾಂಗ್ರೆಸ್ ಎಲ್ಲಾ ಸ್ಥಾನಮಾನಗಳಿಂದ ಉಚ್ಚಾಟನೆ ಮಾಡಿತ್ತು. ನಿನ್ನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಅವರು ಇಂದು ಬಿಜೆಪಿ ಸೇರಿದ್ದಾರೆ. ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಕಾಂಗ್ರೆಸ್‍ನ ಹಿರಿಯ ನಾಯಕನನ್ನು ಸ್ವಾಗತಿಸಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಂಸದರಾಗಿ ಕೆಲಸ ಮಾಡಿದ್ದ ಬಿಸೋಣಿ ಅವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು. ಇದೇ ವರ್ಷ ಪಕ್ಷಕ್ಕೆ ಹೊಸ ಅಧ್ಯಕ್ಷನ ನೇಮಕವಾದ ಬಳಿಕ ಬಿಸೋಣಿ ಅಸಮದಾನ ಹೊಂದಿದ್ದರು.
ಹರ್ಯಾಣದ ಅದಂಪುರ ಕ್ಷೇತ್ರದಿಂದ ಚುನಾಯಿತರಾಗಿದ್ದ ಬಿಸೋಣಿ, ಮುಂದೆ ಅದೇ ಕ್ಷೇತ್ರಕ್ಕೆ ನಡೆಯುವ ಉಪ ಚುನಾವಣೆಯಲ್ಲಿ ಯಾರು ಸ್ರ್ಪಧಿಸಬೇಕು ಎಂದು ಬಿಜೆಪಿ ನಿರ್ಧರಿಸಲಿದೆ. ಆದರೆ ರಾಜ್ಯದ ಜನ ತಮ್ಮ ಮಗ ಭವ್ಯ ಬಿಸೋಣಿ ಆ ಕ್ಷೇತ್ರದಿಂದ ಕಣಕ್ಕಿಳಿಯಬೇಕು ಎಂದು ಬಯಸಿದ್ದಾರೆ ಎಂದು ಕುಲದೀಪ್ ಹೇಳಿದ್ದಾರೆ.
ಈ ಮೊದಲು ಕುಲದೀಪ್ ಮತ್ತು ಅವರ ತಂದೆ ಭಜನ್ ಲಾಲ್ ಅವರು 2027ರಲ್ಲಿ ಹರ್ಯಾಣ ಜನಹಿತ್ ಕಾಂಗ್ರೆಸ್ ಸ್ಥಾಪನೆ ಮಾಡಿದ್ದರು. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಭೂಪಿಂದರ್ ಸಿಂಗ್ ಹೂಡ ಅವರನ್ನು ಮುಖ್ಯಮಂತ್ರಿ ಮಾಡಿತ್ತು.
ನಂತರ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ರ್ಪಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಜೊತೆಯಲ್ಲೇ ಜಂಟಿಯಾಗಿ ಸ್ಪರ್ಧೆ ಮಾಡಿದ್ದರು. ವಿಧಾನಸಭೆ ಚುನಾವಣೆಯಲ್ಲೂ ಮೈತ್ರಿಯಲ್ಲೇ ಸ್ಪರ್ಧೆ ಮಾಡಬೇಕಿತ್ತು. ಆದರೆ ಮೈತ್ರಿ ಮುರಿದು ಬಿದ್ದ ಬಳಿಕ ಕಾಂಗ್ರೆಸ್‍ನತ್ತ ಮುಖ ಮಾಡಿದ್ದರು. ಈಗ ಮತ್ತೆ ಕಾಂಗ್ರೆಸ್‍ನಿಂದ ನಿರ್ಗಮಿಸಿದ್ದಾರೆ.