ನವದೆಹಲಿ,ಜೂ.24- ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ವಿಜೇತರಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ ಸಂಸತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸೋಮವಾರ ಲೋಕಸಭೆಯಲ್ಲಿ ಹಂಗಾಮಿ ಸ್ಪೀಕರ್ ಭಾತ್ರುಹರಿ ಮೆಹ್ತಾಬ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ರಾಹುಲ್ ಗಾಂಧಿ ನೀಡಿರುವ ರಾಜೀನಾಮೆ ಪತ್ರವನ್ನು ಸ್ಪೀಕರ್ ಅಂಗೀಕರಿಸಿದ್ದಾರೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕೇರಳದ ವಯನಾಡು ಮತ್ತು ಉತ್ತರಪ್ರದೇಶ ರಾಯಬರೇಲಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ವಿಜೇತರಾಗಿದ್ದರು.ನಿಯಮಗಳ ಪ್ರಕಾರ ಓರ್ವ ಅಭ್ಯರ್ಥಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದರೂ ಯಾವುದಾದರೂ ಒಂದು ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
ಹೀಗಾಗಿ ರಾಹುಲ್ ಗಾಂಧಿ ಅವರು ರಾಯಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡು ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈಗ ತೆರವಾಗಿರುವ ವಯನಾಡು ಕ್ಷೇತ್ರಕ್ಕೆ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕ ರಾಬರ್ಟ್ ವಾದ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಅವರ ಸ್ಪರ್ಧೆಗೆ ಕಾಂಗ್ರೆಸ್ ಹಸಿರುನಿಶಾನೆ ತೋರಿದೆ.