Wednesday, December 4, 2024
Homeಜಿಲ್ಲಾ ಸುದ್ದಿಗಳು | District Newsಕಾಂಗ್ರೆಸ್ ಮುಖಂಡನ ಪುತ್ರ ಬರ್ಬರ ಕೊಲೆ

ಕಾಂಗ್ರೆಸ್ ಮುಖಂಡನ ಪುತ್ರ ಬರ್ಬರ ಕೊಲೆ

ಕಲಬುರಗಿ, ಡಿ.24- ಜಿಲ್ಲೆಯಲ್ಲಿ ಮತ್ತೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು,ಕಳೆದ ರಾತ್ರಿ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಹೂವಿನ ವ್ಯಾಪಾರಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಅವರ ಪುತ್ರಚಂದ್ರಶೇಖರ್ ಚೌಲ್(21) ಬರ್ಬರ ಕೊಲೆ ಮಾಡಿಲಾಗಿದೆ ಕಲಬುರಗಿ ಜಿಲ್ಲೆ ಆಳಂದ ಪಟ್ಟಣದ ಹೊರವಲಯದ ಜಿಡಗಾ ರಸ್ತೆಯಲ್ಲಿ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಚಂದ್ರಶೇಖರ್ ಚೌಲ್‍ನನ್ನು ಕೊಂದು ಪರಾರಿಯಾಗಿದ್ದಾರೆ.

ಆಳಂದ ಶಾಸಕ ಬಿ.ಆರ್.ಪಾಟೀಲ್ ಆಪ್ತ ಬಸವರಾಜ್ ಚೌಲ್ ಮಗನನ್ನು ಕಳೆದುಕೊಂಡು ಕಣ್ಣೀರು ಹಾಕಿದ್ದಾರೆ ಸ್ನೇಹಿತರಿಂದಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಸದ್ಯ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ನಾನು ದೇಶದ್ರೋಹಿನೋ, ಪ್ರೇಮಿನೋ ಅನ್ನೋದನ್ನ ತಾಯಿ ತೀರ್ಮಾನ ಮಾಡುತ್ತಾಳೆ : ಪ್ರತಾಪ್ ಸಿಂಹ

ಚಿತ್ತಾಪುರ ಪಟ್ಟಣದಲ್ಲಿ ನಡೆದ ಮತ್ತೊಂದು ಘಟನೆಯಲ್ಲಿ ಯುವಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಬಳಿಕ ಗುರುತು ಸಿಗಬಾರದೆಂದು ಶವವನ್ನ ಪೆಟ್ರೋಲ್ ಹಾಕಿ ಸುಡಲಾಗಿತ್ತು. ಸ್ಥಳಕ್ಕೆ ಬಂದ ಪೊಲೀಸರು ಮೃತನನ್ನು ದಾವಲ್‍ಸಾಬ್ (25)ಎಂದು ಪತ್ತೆಹಚ್ಚಿದ್ದಾರೆ. ಈತ ಚಿತ್ತಾಪುರ ಪಟ್ಟಣದಲ್ಲಿ ಹೂವಿನ ವ್ಯಾಪಾರಿಯಾಗಿದ್ದು ಅಂಗಡಿ ಇದೆ ತಡ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿದ್ದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಸ್ಥಳಕ್ಕೆ ಎಸ್ಪಿ ಅಡ್ಡೂರು ಶ್ರೀನಿವಾಸುಲು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಕೊಲೆ ಮಾಡಿದ್ದಾರೆ ಎಂಬುವುದು ತಿಳಿದುಬಂದಿಲ್ಲ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿ.

RELATED ARTICLES

Latest News