ನವದೆಹಲಿ, ಆ.13- ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಮತ್ತೊಮ್ಮೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಇದನ್ನು ಖಚಿತ ಪಡಿಸಿದ್ದು, ಸರ್ಕಾರದ ಶಿಷ್ಠಚಾರಗಳನ್ನು ಪಾಲನೆ ಮಾಡಿ ಅಧ್ಯಕ್ಷರು ಪ್ರತ್ಯೇಕವಾಗಿ ವಾಸವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಕಳೆದ ಎರಡು ತಿಂಗಳ ಹಿಂದೆ ಕೋವಿಡ್ ಸೋಂಕಿನ ಕಾರಣಕ್ಕೆ ಸೋನಿಯಾ ಗಾಂಧಿ ಅವರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಆ ವೇಳೆ ಅವರು ಜಾರಿ ನಿರ್ದೇಶನಾಲಯದ ವಿಚಾರಣೆಯಿಂದ ದೂರ ಉಳಿಯಬೇಕಾಗಿತ್ತು. ಈಗ ಮತ್ತೊಮ್ಮೆ ಸೋಂಕು ಕಾಣಿಸಿಕೊಂಡಿದೆ. ಅವರು ಆರೋಗ್ಯ ಉತ್ತಮವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಾರ ಸೋನಿಯಾ ಗಾಂಧಿ ಅವರ ಪುತ್ರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾರಿಗೆ ಕೋವಿಡ್ ಸೋಂಕು ಖಚಿತ ಪಟ್ಟಿತ್ತು. ಪ್ರಿಯಾಂಕ ಅವರು ಮೂರು ತಿಂಗಳಲ್ಲಿ ಎರಡು ಬಾರಿ ಸೋಂಕಿಗೆ ಸಿಲುಕಿದ್ದಾರೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಏರಿಳಿಕೆ ಮುಂದುವರೆದಿದ್ದು, ನಿನ್ನೆ 16 ಸಾವಿರ ಮಂದಿಗೆ ಸೋಂಕು ತಗುಲಿದೆ.